ಕೊರೊನಾ 2ನೇ ಅಲೆ ಭೀತಿಯಲ್ಲೇ ಲಸಿಕೆಗೆ ಹೆಚ್ಚಿದ ಬೇಡಿಕೆ!

ನವದೆಹಲಿ, ಮೇ 06: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಜನರಲ್ಲಿ ಭಯವನ್ನು ಹೆಚ್ಚಿಸುತ್ತಿದೆ. ಕೊವಿಡ್-19 ಸೋಂಕಿನ ಭಯದಲ್ಲೇ ಜನರು ಲಸಿಕೆ ಹಾಕಿಸಿಕೊಳ್ಳುವತ್ತ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ಇದರ ಮಧ್ಯೆ ಲಸಿಕೆ ಅಭಾವ ಕೂಡ ಎದುರಾಗಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 111 ದಿನಗಳೇ ಕಳೆದು ಹೋಗಿವೆ. ಈ ಅವಧಿಯಲ್ಲಿ ದೇಶದ 16,48,76,248 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ ಮೇ 6ರಂದು ಒಂದೇ ದಿನ 22,98,530 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 10,24,548 ಜನರಿಗೆ ಮೊದಲ ಡೋಸ್ ಹಾಗೂ 12,73,982 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಯಾವ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಹೆಚ್ಚು ಲಸಿಕೆ?

ಯಾವ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಹೆಚ್ಚು ಲಸಿಕೆ?

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗ ಹೆಚ್ಚುತ್ತಿರುವ ಹಿನ್ನೆಲೆ 12 ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆ ಕಾರ್ಯ ಆರಂಭಿಸಲಾಗಿದೆ. ಕಳೆದ ಮೇ 1ರಿಂದ ಈವರೆಗೂ 11,64,076 ಜನರಿಗೆ ಲಸಿಕೆ ನೀಡಲಾಗಿದ್ದು, ಈ ಪೈಕಿ ಛತ್ತೀಸ್ ಗಢ 1026, ನವದೆಹಲಿ 1,83,498, ಗುಜರಾತ್ 2,24,090, ಹರಿಯಾಣ 1,68,367, ಜಮ್ಮು ಮತ್ತು ಕಾಶ್ಮೀರ 21,249, ಕರ್ನಾಟಕ 7,067, ಮಹಾರಾಷ್ಟ್ರ 2,15,145, ಒಡಿಶಾ 28,163, ಪಂಜಾಬ್ 2,184, ರಾಜಸ್ಥಾನ 2,18,450, ತಮಿಳುನಾಡು 8,418, ಹಾಗೂ ಉತ್ತರ ಪ್ರದೇಶದಲ್ಲಿ 86,419 ಮಂದಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೊದಲ ಹಂತದ ಲಸಿಕೆ ವಿತರಣೆ ಅಂಕಿ-ಅಂಶ

ದೇಶದಲ್ಲಿ ಮೊದಲ ಹಂತದ ಲಸಿಕೆ ವಿತರಣೆ ಅಂಕಿ-ಅಂಶ

ಭಾರತದಲ್ಲಿ ಈವರೆಗೂ 95,00,564 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 63,91,562 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,37,58,487 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 75,36,320 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ 2ನೇ ಹಂತದ ಲಸಿಕೆ ವಿತರಣೆ ಅಂಕಿ-ಅಂಶ

ದೇಶದಲ್ಲಿ 2ನೇ ಹಂತದ ಲಸಿಕೆ ವಿತರಣೆ ಅಂಕಿ-ಅಂಶ

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,42,89,107 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 53,44,986 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,33,18,278 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,35,72,868 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ 4 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 4,12,262 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, 3,980 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಒಂದು ದಿನದಲ್ಲಿ 3,29,113 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 2,10,77,410 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೂ 1,72,80,844 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 23,01,68 ಸಾವಿನ ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ 35,66,398 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+