ಭಾರತದಲ್ಲಿ 17 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಮೇ 10: ಭಾರತದಲ್ಲಿ ಒಂದು ಕಡೆ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಹಾಗೂ ವ್ಯಾಪ್ತಿ ಹೆಚ್ಚುತ್ತಿದೆ. ಇನ್ನೊಂದು ಕಡೆಯಲ್ಲಿ ಕೊವಿಡ್-19 ಲಸಿಕೆಯ ಕೊರತೆ ಸೃಷ್ಟಿಯಾಗುತ್ತಿದ್ದು, ಲಸಿಕೆ ವಿತರಣೆ ಪ್ರಮಾಣ ಕಡಿಮೆ ಆಗುತ್ತಿರುವುದು ಅಂಕಿ-ಅಂಶಗಳ ಸಮೇತ ಗೋಚರವಾಗುತ್ತಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಆರಂಭವಾಗಿ 114 ದಿನ ಕಳೆದಿದೆ. ಈ ಅವಧಿಯಲ್ಲಿ 17,01,53,432 ಕೋಟಿ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾನುವಾರ ದೇಶದ ಹಲವು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಕೇಂದ್ರಗಳನ್ನೇ ತೆರೆದಿರಲಿಲ್ಲ. ಈ ಹಿನ್ನೆಲೆ ಕಳದೆ24 ಗಂಟೆಗಳಲ್ಲಿ 6,71,646 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 3,97,231 ಜನರಿಗೆ ಮೊದಲ ಡೋಸ್ ಹಾಗೂ 2,74,415 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

In 114 Days 17.01 Crore Beneficiaries Got Vaccinated Against Coronavirus Across India

ಮೂರು ಹಂತಗಳಲ್ಲಿ ಕೊರೊನಾ ಲಸಿಕೆ ವಿತರಣೆ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಯಾವ ಹಂತದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?

ಕಳೆದ ಮೇ 1ರಿಂದ ಈವರೆಗೂ18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 20,29,395 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 95,46,871 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 64,71,090 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,39,71,341 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 77,54,283 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,51,74,561 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 65,55,714 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,36,72,259 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,49,77,918 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+