ಭಾರತದಲ್ಲಿ 17.51 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಮೇ 12: ಭಾರತದಲ್ಲಿ ಲಸಿಕೆ ವಿತರಣೆ ಸಂದರ್ಭದಲ್ಲೇ ಸಾರ್ವಜನಿಕರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಳ್ಳುವಂತಾ ಆತಂಕಕಾರಿ ವಾತಾವರಣ ಸೃಷ್ಟಿಯಾಗುತ್ತಿದೆ. ಕೊವಿಡ್-19 ಲಸಿಕೆ ಅಭಾವ ಸೃಷ್ಟಿಯಾಗಿದ್ದು ನಿಗದಿತ ಪ್ರಮಾಣದ ಲಸಿಕೆಯನ್ನು ವಿತರಿಸಿದ ನಂತರದಲ್ಲಿ "ನಾಳೆ ಬಾ" ಎನ್ನುವ ಬೋರ್ಡ್ ತೋರಿಸಲಾಗುತ್ತಿದೆ.
ಒಂದು ಕೊವಿಡ್-19 ಲಸಿಕೆ ಕೇಂದ್ರದಲ್ಲಿ ದಿನವೊಂದಕ್ಕೆ 50ಕ್ಕಿಂತ ಕಡಿಮೆ ಜನರಿಗೆ ಮೊದಲ ಡೋಸ್ ನೀಡಲಾಗುತ್ತಿದೆ. 21ನೇ ವ್ಯಕ್ತಿಗೆ ಮೊದಲ ಡೋಸ್ ಲಸಿಕೆ ಸಿಗುತ್ತಿಲ್ಲ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 116 ದಿನಗಳೇ ಕಳೆದಿದ್ದು, ಈವರೆಗೂ 17,51,71,482 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಮಂಗಳವಾರ ರಾತ್ರಿ 8 ಗಂಟೆ ವೇಳೆಗೆ 23,85,092 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 10,65,634 ಜನರಿಗೆ ಮೊದಲ ಡೋಸ್ ಹಾಗೂ 13,19,458 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

In 116 Days 17.51 Crore Beneficiaries Got Vaccinated Against Coronavirus Across India

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:
ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 30,39,287 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 95,81,872 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 65,38,656 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,41,45,083 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 79,50,430 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,58,70,091 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 78,17,926 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,39,54,858 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,62,73,279 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+