ಭಾರತದಲ್ಲಿ ತಗ್ಗಿದ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ!

ನವದೆಹಲಿ, ಮೇ 13: ಭಾರತದಲ್ಲಿ ಒಂದು ಕಡೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರುಮುಖವಾಗಿ ಸಾಗುತ್ತಿದ್ದರೆ, ಇನ್ನೊಂದು ಕಡೆಯಲ್ಲಿ ಕೊವಿಡ್-19 ಲಸಿಕೆಯ ವಿತರಣೆ ಪ್ರಮಾಣ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ.

ದೇಶದಲ್ಲಿ ಒಂದು ದಿನಕ್ಕೆ 30-35 ಲಕ್ಷ ಜನರಿಗೆ ನೀಡಲಾಗುತ್ತಿದ್ದ ಕೊರೊನಾವೈರಸ್ ಲಸಿಕೆಯ ಸಂಖ್ಯೆ ಇದೀಗ ಅರ್ಧದಷ್ಟು ಕಡಿಮೆಯಾಗಿದೆ. ಮಂಗಳವಾರ 23 ಲಕ್ಷ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದ್ದು, ಬುಧವಾರ ಈ ಸಂಖ್ಯೆ 17 ಲಕ್ಷಕ್ಕೆ ಇಳಿಕೆಯಾಗಿದೆ.

ಬುಧವಾರ ರಾತ್ರಿ 8 ಗಂಟೆ ವೇಳೆಗೆ 17,72,261 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 9,38,933 ಜನರಿಗೆ ಮೊದಲ ಡೋಸ್ ಹಾಗೂ 8,33,328 ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 117 ದಿನಗಳಲ್ಲಿ 17,70,85,371 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

In 117 Days 17.70 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 34,66,895 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ95,98,626 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 65,68,343 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,42,26,185 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 80,25,849 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,62,14,942 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 81,31,218 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,40,88,334 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,67,64,979 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+