ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಇಳಿಮುಖ

ನವದೆಹಲಿ, ಮೇ 16: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಾವ ಸೃಷ್ಟಿ ಆಗುತ್ತಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗುತ್ತಿದೆ. ದೇಶದಲ್ಲಿ ದಿನದಿಂದ ದಿನಕ್ಕೆ ಲಸಿಕೆ ವಿತರಣೆ ಪ್ರಮಾಣ ಇಳಿಮುಖ ಆಗುತ್ತಿರುವುದು ಗೊತ್ತಾಗಿದೆ.
ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 120 ದಿನಗಳು ಕಳೆದಿವೆ. ಈ ಅವಧಿಯಲ್ಲಿ 18,21,99,668 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರ ರಾತ್ರಿ 8 ಗಂಟೆ ವೇಳೆಗೆ 17,14,247 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 11,19,365 ಜನರಿಗೆ ಮೊದಲ ಡೋಸ್ ಹಾಗೂ 5,94,882 ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

In 120 Days 18.21 Crore Beneficiaries Got Vaccinated Against Coronavirus Across India

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:
ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 48,21,550 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 96,42,077 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು66,40,753 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,44,23,966 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 81,86,165 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,71,55,909 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 90,63,011 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,44,67,664 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,77,98,573 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+