ಕೊರತೆ ಕಾರಣ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರಿ ಇಳಿಮುಖ

ನವದೆಹಲಿ, ಮೇ 20: ಕೊರೊನಾವೈರಸ್ ಲಸಿಕೆ ಕೊರತೆಗೆ ಕೇಂದ್ರ ಸರ್ಕಾರ ಈವರೆಗೂ ಯಾವುದೇ ಕ್ರಮಗಳನ್ನು ತೆಗೆದುಕೊಂಡಿಲ್ಲ. ದಿನದಿಂದ ದಿನಕ್ಕೆ ಕೊವಿಡ್-19 ಲಸಿಕೆ ಪಡೆಯುವವರ ಸಂಖ್ಯೆ ಇಳಿಮುಖವಾಗುತ್ತಿರುವುದೇ ಅದಕ್ಕೆ ಸಾಕ್ಷಿಯಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 124 ದಿನಗಳಲ್ಲಿ 18,69,89,265 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಬುಧವಾರ ರಾತ್ರಿ 8 ಗಂಟೆ ವೇಳೆಗೆ 11,45,569 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 9,91,831 ಜನರಿಗೆ ಮೊದಲ ಡೋಸ್ ಹಾಗೂ 1,53,738 ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

In 124 Days 18.69 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 70,12,752 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 96,85,597 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,67,071 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,46,34,130 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,56,235 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,83,40,325 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 94,34,731 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,49,33,136 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,80,25,288 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+