ಭಾರತದಲ್ಲಿ 125 ದಿನ: ಕೊರೊನಾವೈರಸ್ ಲಸಿಕೆ ವಿತರಣೆ ಲೆಕ್ಕಾಚಾರ

ನವದೆಹಲಿ, ಮೇ 21: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 124 ದಿನಗಳಲ್ಲಿ 19,18,10,604 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಬುಧವಾರ ರಾತ್ರಿ 8 ಗಂಟೆ ವೇಳೆಗೆ 14,56,088 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 12,73,785 ಜನರಿಗೆ ಮೊದಲ ಡೋಸ್ ಹಾಗೂ 1,82,303 ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

 In 125 Days 19.18 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 85,84,054 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 97,23,296 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 66,80,206 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,47,84,918 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 82,84,445 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,98,12,707 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 95,75,946 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,62,36,899 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,81,28,133 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+