ಭಾರತದಲ್ಲಿ 19.49 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಮೇ 23: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಕೊರತೆ ಸೃಷ್ಟಿ ಆಗಿರುವುದು ಅಂಕಿ-ಅಂಶಗಳಿಂದ ಸ್ಪಷ್ಟವಾಗುತ್ತಿದೆ. ಪ್ರತಿನಿತ್ಯ 15 ಲಕ್ಷಕ್ಕಿಂತ ಕಡಿಮೆ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಣೆ ಮಾಡಲಾಗುತ್ತಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 125 ದಿನಗಳಲ್ಲಿ 19,49,51,603 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಶನಿವಾರ ರಾತ್ರಿ 8 ಗಂಟೆ ವೇಳೆಗೆ 15,52,126 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 13,80,232 ಜನರಿಗೆ ಮೊದಲ ಡೋಸ್ ಹಾಗೂ 1,71,894 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

 In 127 Days 19.49 Crore Beneficiaries Got Vaccinated Against Coronavirus Across India

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 99,79,676 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 97,52,422 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 67,00,147 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,49,47,941 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 83,22,058 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,06,73,244 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 97,84,465 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,65,49,096 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,82,42,554 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+