ಭಾರತದಲ್ಲಿ ಅಂತೂ-ಇಂತೂ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಏರಿಕೆ!

ನವದೆಹಲಿ, ಮೇ 24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸದ ನಡುವೆ ಲಸಿಕೆ ವಿತರಣೆಯು ಕೊಂಚ ವೇಗ ಪಡೆದುಕೊಂಡಿದೆ. ಕಳೆದ 24 ಗಂಟೆಗಳಲ್ಲಿ 23 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 129 ದಿನಗಳಲ್ಲಿ 19,84,43,550 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ರಾತ್ರಿ 8 ಗಂಟೆ ವೇಳೆಗೆ 23,65,395 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 21,90,849 ಜನರಿಗೆ ಮೊದಲ ಡೋಸ್ ಹಾಗೂ 1,74,546 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

In 129 Days 19.84 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 1,18,81,337 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 97,78,142 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 67,18,515 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,50,74,689 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 83,55,642 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,15,11,397 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 99,13,239 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,68,98,522 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,83,12,067 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+