ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 20 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಮೇ 25: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 18 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 130 ದಿನಗಳಲ್ಲಿ 20,04,94,991 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Fact Check: ಕೊರೊನಾವೈರಸ್ ರೂಪಾಂತರಗಳಿಗೆ ಲಸಿಕೆಯೇ ಕಾರಣ!?Fact Check: ಕೊರೊನಾವೈರಸ್ ರೂಪಾಂತರಗಳಿಗೆ ಲಸಿಕೆಯೇ ಕಾರಣ!?

ಮಂಗಳವಾರ ರಾತ್ರಿ 8 ಗಂಟೆ ವೇಳೆಗೆ 18,77,419 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 16,90,691 ಜನರಿಗೆ ಮೊದಲ ಡೋಸ್ ಹಾಗೂ 1,86,728 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

 In 130 Days 20.04 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 1,28,74,546 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 97,94,835 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 67,28,443 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,51,62,077 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 83,77,270 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,20,47,952 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,00,24,157 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,71,19,900 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,83,65,811 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

English summary
In 130 Days 20.04 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X