ಭಾರತದಲ್ಲಿ ಒಂದೇ ದಿನ 26.58 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಮೇ 27: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಹೆಚ್ಚುತ್ತಿದೆ. ಇದರ ಮಧ್ಯೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 26 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 132 ದಿನಗಳಲ್ಲಿ 20,54,51,902 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರ ರಾತ್ರಿ 7 ಗಂಟೆ ವೇಳೆಗೆ 26,58,218 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 24,81,196 ಜನರಿಗೆ ಮೊದಲ ಡೋಸ್ ಹಾಗೂ 1,77,022 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

 In 132 Days 20.54 Crore Beneficiaries Got Vaccinated Against Coronavirus Across India

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 1,51,52,040 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 98,27,025 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು67,47,730 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,53,39,068 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 84,19,860 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,35,32,545 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,02,15,474 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,77,48,235 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,84,69,925 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+