ಭಾರತದಲ್ಲಿ 1 ಗಂಟೆಗೆ 1 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಲಸಿಕೆ!

ನವದೆಹಲಿ, ಜೂನ್ 01: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ನಡುವೆ ಲಸಿಕೆ ವಿತರಣೆ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಒಂದು ಗಂಟೆಗೆ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 136 ದಿನಗಳಲ್ಲಿ 21,58,18,547 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೋಮವಾರ ರಾತ್ರಿ 7 ಗಂಟೆ ವೇಳೆಗೆ 25,52,501 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 22,75,324 ಜನರಿಗೆ ಮೊದಲ ಡೋಸ್ ಹಾಗೂ 2,77,177 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

In 136 Days 21.58 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ:

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 2,02,10,889 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 23,491 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಭಾರತದಲ್ಲಿ ಈವರೆಗೂ 98,83,778 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 67,87,633 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,56,67,311 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 85,21,965 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,64,02,012 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,07,15,693 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,88,31,736 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,87,74,039 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಎಷ್ಟು ಹಂತಗಳಲ್ಲಿ ಲಸಿಕೆ ವಿತರಣೆ?:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+