• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

18-44 ವಯೋಮಾನದವರಿಗೂ ಕೊರೊನಾ ಲಸಿಕೆ; ವಿತರಣೆ ಹಿಂದಿನ ರಹಸ್ಯವೇನು?

|
Google Oneindia Kannada News

ನವದೆಹಲಿ, ಜೂನ್ 02: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಹೆಚ್ಚಾಗಿ ಯುವಕರನ್ನು ಬಾಧಿಸುತ್ತಿರುವುದು ಇತ್ತೀಚಿನ ಅಂಕಿ-ಅಂಶಗಳಿಂದ ಸ್ಪಷ್ಟವಾಗಿದೆ. ಈ ಹಿನ್ನೆಲೆ 18 ರಿಂದ 44 ವಯೋಮಾನದವರಿಗೆ ಕೊವಿಡ್-19 ಲಸಿಕೆ ವಿತರಿಸುವಲ್ಲಿ ಆದ್ಯತೆ ನೀಡಲಾಗುತ್ತಿದೆ.

ದೇಶದಲ್ಲಿ ಮೇ 1 ರಿಂದ ಕೊರೊನಾವೈರಸ್ ಲಸಿಕೆಯನ್ನು 18 ರಿಂದ 44 ವರ್ಷದೊಳಗಿನ ಫಲಾನುಭವಿಗಳಿಗೆ ವಿತರಿಸುವುದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತು. ಕೊವಿಡ್-19 ಲಸಿಕೆ ಕೊರತೆ ಹಿನ್ನೆಲೆ ಹಲವು ರಾಜ್ಯಗಳಲ್ಲಿ ಈ ವಯೋಮಾನದವರಿಗೆ ತಡವಾಗಿ ಲಸಿಕೆ ವಿತರಣೆ ಆರಂಭಿಸಲಾಯಿತು.

ಅಬ್ಬಬ್ಬಾ ಆಶ್ಚರ್ಯ: ಎಣ್ಣೆ ಖರೀದಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಕಡ್ಡಾಯ!ಅಬ್ಬಬ್ಬಾ ಆಶ್ಚರ್ಯ: ಎಣ್ಣೆ ಖರೀದಿಗೆ ಕೊರೊನಾ ಲಸಿಕೆ ಪ್ರಮಾಣಪತ್ರ ಕಡ್ಡಾಯ!

ಭಾರತದಲ್ಲಿ ಇದುವರಿಗೆ 18 ರಿಂದ 44 ವರ್ಷದೊಳಗಿನ 2.13 ಕೋಟಿ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 137 ದಿನಗಳಲ್ಲಿ ಲಸಿಕೆ ಪಡೆದವ ಸಂಖ್ಯೆ ಎಷ್ಟಿದೆ?

ದೇಶದಲ್ಲಿ 137 ದಿನಗಳಲ್ಲಿ ಲಸಿಕೆ ಪಡೆದವ ಸಂಖ್ಯೆ ಎಷ್ಟಿದೆ?

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 136 ದಿನಗಳಲ್ಲಿ 21,83,58,591 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 22,08,941 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 19,45,581 ಜನರಿಗೆ ಮೊದಲ ಡೋಸ್ ಹಾಗೂ 2,63,360 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಮೂರು ಹಂತಗಳಲ್ಲಿ ಕೊರೊನಾ ಲಸಿಕೆ ವಿತರಣೆ

ಮೂರು ಹಂತಗಳಲ್ಲಿ ಕೊರೊನಾ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

18 ರಿಂದ 44 ವಯೋಮಾನದವರಿಗೆ ಲಸಿಕೆ

18 ರಿಂದ 44 ವಯೋಮಾನದವರಿಗೆ ಲಸಿಕೆ

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 2,13,01,448 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 39,282 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

1 ಮತ್ತು 2ನೇ ಹಂತದಲ್ಲಿ ಯಾರಿಗೆ ಎಷ್ಟು ಲಸಿಕೆ ವಿತರಣೆ?

1 ಮತ್ತು 2ನೇ ಹಂತದಲ್ಲಿ ಯಾರಿಗೆ ಎಷ್ಟು ಲಸಿಕೆ ವಿತರಣೆ?

ಭಾರತದಲ್ಲಿ ಈವರೆಗೂ 98,98,617 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,02,675 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,57,54,583 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 85,54,588 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,71,54,837 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,08,57,683 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,91,30,042 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,88,64,836 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
In 137 Days 21.83 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X