ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 22 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ!

|
Google Oneindia Kannada News

ನವದೆಹಲಿ, ಜೂನ್ 03: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ನಡುವೆ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 22 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 138 ದಿನಗಳಲ್ಲಿ 22,08,62,449 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

3 ನೇ ಅಲೆ ಎದುರಿಸಲು ಸಜ್ಜಾಗಿರಿ: ಕೈಗಾರಿಕಾ ರಂಗದ ಪ್ರತಿನಿಧಿಗಳಿಗೆ ಗೋಯಲ್‌ ಸೂಚನೆ3 ನೇ ಅಲೆ ಎದುರಿಸಲು ಸಜ್ಜಾಗಿರಿ: ಕೈಗಾರಿಕಾ ರಂಗದ ಪ್ರತಿನಿಧಿಗಳಿಗೆ ಗೋಯಲ್‌ ಸೂಚನೆ

ಬುಧವಾರ ರಾತ್ರಿ 7 ಗಂಟೆ ವೇಳೆಗೆ 22,45,112 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 20,28,867 ಜನರಿಗೆ ಮೊದಲ ಡೋಸ್ ಹಾಗೂ 2,16,245 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

 In 138 Days 22.08 Crore Beneficiaries Got Vaccinated Against Coronavirus Across India

ಮೂರು ಹಂತಗಳಲ್ಲಿ ಕೊರೊನಾ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಯುವಕರು, ಮಧ್ಯ ವಯಸ್ಕರಿಗೆ ಲಸಿಕೆ:

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 2,25,40,803 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 59,052 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಮೊದಲ ಹಾಗೂ ಎರಡನೇ ಹಂತದ ಲಸಿಕೆ ವಿತರಣೆ:

ಭಾರತದಲ್ಲಿ ಈವರೆಗೂ 99,11,519 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,14,165 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,58,39,812 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 85,76,750 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,78,25,793 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,09,67,786 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,93,85,071 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,89,41,698 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
In 138 Days 22.08 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X