ಭಾರತದಲ್ಲಿ ಪ್ರತಿ ಗಂಟೆಗೆ 1 ಲಕ್ಷಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಲಸಿಕೆ

ನವದೆಹಲಿ, ಜೂನ್ 04: ಭಾರತದಲ್ಲಿ ಪ್ರತಿ ಗಂಟೆಗೆ ಒಂದು ಲಕ್ಷಕ್ಕಿಂತಲೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕೆಳದ 24 ಗಂಟೆಗಳಲ್ಲಿ 26ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 139 ದಿನಗಳಲ್ಲಿ 22,37,27,632 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರ ರಾತ್ರಿ 7 ಗಂಟೆ ವೇಳೆಗೆ 26,24,971 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 24,04,166 ಜನರಿಗೆ ಮೊದಲ ಡೋಸ್ ಹಾಗೂ 2,20,805 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

In 139 Days 22.37 Crore Beneficiaries Got Vaccinated Against Coronavirus Across India

ಯುವಕರು, ಮಧ್ಯ ವಯಸ್ಕರಿಗೆ ಲಸಿಕೆ:

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 2,40,54,868 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 86,568 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಮೊದಲ ಹಾಗೂ ಎರಡನೇ ಹಂತದ ಲಸಿಕೆ ವಿತರಣೆ:

ಭಾರತದಲ್ಲಿ ಈವರೆಗೂ 99,24,634 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,26,409 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,59,18,192 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 86,04,747 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,85,51,044 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,10,74,273 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,96,72,572 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,90,14,325 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+