ಭಾರತದಲ್ಲಿ 24 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಜೂನ್ 10: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗವನ್ನು ದಿನದಿಂದ ದಿನಕ್ಕೆ ಹೆಚ್ಚಿಸಲಾಗಿದೆ. ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 143 ದಿನಗಳಲ್ಲಿ 24,24,79,167 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಬುಧವಾರ ರಾತ್ರಿ 7 ಗಂಟೆ ವೇಳೆಗೆ 31,31,759 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 28,37,572 ಜನರಿಗೆ ಮೊದಲ ಡೋಸ್ ಹಾಗೂ 2,94,187 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಕೊರೊನಾ ಲಸಿಕೆ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ ಭಾರತ
ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 3,38,08,845 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 4,05,114 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.
ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ
ಭಾರತದಲ್ಲಿ ಈವರೆಗೂ 1,00,12,624 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 69,11,311 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,64,71,228 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 87,51,277 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,33,23,267 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,16,22,718 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,16,38,580 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,95,34,203 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.