ಭಾರತದಲ್ಲಿ ಒಂದೇ ದಿನ 30 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆ
ನವದೆಹಲಿ, ಜೂನ್ 11: ಭಾರತದಲ್ಲಿ ಒಂದೇ ದಿನ 30 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಜನವರಿ 16ರಿಂದ ಈವರೆಗಿನ 146 ದಿನಗಳಲ್ಲಿ 24,58,47,212 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಗುರುವಾರ ರಾತ್ರಿ 7 ಗಂಟೆ ವೇಳೆಗೆ 30,32,675 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 27,33,087 ಜನರಿಗೆ ಮೊದಲ ಡೋಸ್ ಹಾಗೂ2,99,588 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 3,58,49,328 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 4,84,740 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ
ಭಾರತದಲ್ಲಿ ಈವರೆಗೂ 1,00,24,046 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 69,28,432 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,65,46,785 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 87,80,509 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,39,73,962 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,17,26,702 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,18,98,773 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,96,33,935 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.












Click it and Unblock the Notifications