ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

150 ದಿನ: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಪಡೆದವರೆಷ್ಟು ಜನ?

|
Google Oneindia Kannada News

ನವದೆಹಲಿ, ಜೂನ್ 14: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಕಡಿಮೆಯಾಗುತ್ತಿದೆ. ಇನ್ನೊಂದು ಕಡೆ ಕೊವಿಡ್-19 ಲಸಿಕೆ ವಿತರಣೆ ವೇಗ ಪಡೆದುಕೊಳ್ಳುತ್ತಿರುವುದು ಅಂಕಿ-ಅಂಶಗಳ ಸಹಿತ ಸಾಬೀತಾಗುತ್ತಿದೆ.

ಭಾರತದಲ್ಲಿ ಪ್ರತಿ ಗಂಟೆಗೆ 1.45 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 150 ದಿನಗಳಲ್ಲಿ 25,87,13,321ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ.

Good News: ಭಾರತದಲ್ಲಿ ಅತಿ ಕಡಿಮೆ ಬೆಲೆಯ ಕೊರೊನಾವೈರಸ್ ಲಸಿಕೆ! Good News: ಭಾರತದಲ್ಲಿ ಅತಿ ಕಡಿಮೆ ಬೆಲೆಯ ಕೊರೊನಾವೈರಸ್ ಲಸಿಕೆ!

ಸೋಮವಾರ ರಾತ್ರಿ 7 ಗಂಟೆ ವೇಳೆಗೆ 35,96,462 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ31,84,503 ಜನರಿಗೆ ಮೊದಲ ಡೋಸ್ ಹಾಗೂ 4,11,959 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹಂತಗಳು

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹಂತಗಳು

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಮಧ್ಯ ವಯಸ್ಕರು ಮತ್ತು ಯುವಕರಿಗೆ ಲಸಿಕೆ ವಿತರಣೆ

ಮಧ್ಯ ವಯಸ್ಕರು ಮತ್ತು ಯುವಕರಿಗೆ ಲಸಿಕೆ ವಿತರಣೆ

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 4,34,35,032 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 8,33,808 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಭಾರತದಲ್ಲಿ ಈವರೆಗೂ 1,00,67,641 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 69,81,884 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,68,38,400 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 88,76,931 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,65,48,740 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,20,81,922 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,29,78,733 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,00,70,230 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಅತಿಕಡಿಮೆ ಕೊವಿಡ್19 ಪ್ರಕರಣ ದಾಖಲು

ದೇಶದಲ್ಲಿ ಅತಿಕಡಿಮೆ ಕೊವಿಡ್19 ಪ್ರಕರಣ ದಾಖಲು

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ 2ನೇ ಅಲೆ ಆರಂಭವಾದ 72 ದಿನಗಳಲ್ಲೇ ಮೊದಲ ಬಾರಿಗೆ 75,000ಕ್ಕೂ ಕಡಿಮೆ ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 70,421 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲೇ 3921 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, 1,19,501 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2,95,10,410ಕ್ಕೆ ಏರಿಕೆಯಾಗಿದ್ದು, ಈವರೆಗೂ 2,81,62,947 ಸೋಂಕಿತರು ಗುಣಮುಖರಾಗಿದ್ದಾರೆ. ಇದುವರೆಗೂ ಕೊವಿಡ್-19 ಸೋಂಕಿಗೆ 3,74,305 ಜನರು ಪ್ರಾಣ ಬಿಟ್ಟಿದ್ದು, ಇದರ ಹೊರತಾಗಿ 9,73,158 ಸಕ್ರಿಯ ಪ್ರಕರಣಗಳಿವೆ.

English summary
In 150 Days 25.87 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X