ಭಾರತದಲ್ಲಿ 1 ಗಂಟೆಗೆ 1 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊರೊನಾವೈರಸ್ ಲಸಿಕೆ!

ನವದೆಹಲಿ, ಜೂನ್ 15: ಭಾರತದಲ್ಲಿ ಪ್ರತಿಯೊಂದು ಗಂಟೆಗೆ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 151 ದಿನಗಳಲ್ಲಿ 26,17,40,273 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,68,858 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 21,98,144 ಜನರಿಗೆ ಮೊದಲ ಡೋಸ್ ಹಾಗೂ 3,70,714 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಸೋಂಕಿನ 2ನೇ ಅಲೆಯು 18 ರಿಂದ 44 ವರ್ಷದವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆ ಯುವಕರು ಹಾಗೂ ಮಧ್ಯ ವಯಸ್ಕರಿಗೆ ಲಸಿಕೆ ವಿತರಿಸುವುದರಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಮೇ 1ರಿಂದ ಈವರೆಗೂ 4,49,87,004 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 8,95,517 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ವಿತರಣೆ

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ವಿತರಣೆ

ಭಾರತದಲ್ಲಿ ಹಲವು ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಭಾರತದಲ್ಲಿ ಈವರೆಗೂ 1,00,78,623 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 69,99,669 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,69,05,708 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 89,06,072 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,72,40,865 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,21,93,878 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,32,64,880 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,02,68,057 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಭಾರತದಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಭಾರತದಲ್ಲಿ 75 ದಿನಗಳ ನಂತರ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 60,471 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,17,525 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2726 ಮಂದಿ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಒಟ್ಟು 2,95,70,881 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,82,80,472 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,77,031 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 9,13,378 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+