ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಹಿಸುದ್ದಿ: ಭಾರತದಲ್ಲಿ ಒಂದೇ ದಿನ 32 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ!

|
Google Oneindia Kannada News

ನವದೆಹಲಿ, ಜೂನ್ 16: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಭೀತಿ ನಡುವೆ ಲಸಿಕೆ ವಿತರಣೆ ವೇಗದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 32 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಬುಧವಾರ ರಾತ್ರಿ 7 ಗಂಟೆ ವೇಳೆಗೆ 32,62,233 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 29,05,658 ಜನರಿಗೆ ಮೊದಲ ಡೋಸ್ ಹಾಗೂ 3,56,575 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

DRDO ಅಭಿವೃದ್ಧಿಪಡಿಸಿದ ಕೊರೊನಾ ಔಷಧಿಯನ್ನು ಎಂಥವರು ಬಳಸಬೇಕು? DRDO ಅಭಿವೃದ್ಧಿಪಡಿಸಿದ ಕೊರೊನಾ ಔಷಧಿಯನ್ನು ಎಂಥವರು ಬಳಸಬೇಕು?

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 152 ದಿನಗಳಲ್ಲಿ26,53,17,472 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹಂತಗಳು

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹಂತಗಳು

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

10 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ವಿತರಿಸಿದ ರಾಜ್ಯಗಳು

10 ಲಕ್ಷಕ್ಕಿಂತ ಹೆಚ್ಚು ಜನರಿಗೆ ಲಸಿಕೆ ವಿತರಿಸಿದ ರಾಜ್ಯಗಳು

ಭಾರತದಲ್ಲಿ ಹಲವು ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಆರೋಗ್ಯ ಸಿಬ್ಬಂದಿ ಮತ್ತು ಕಾರ್ಮಿಕರು, ಹಿರಿಯರಿಗೆ ಲಸಿಕೆ

ಭಾರತದಲ್ಲಿ ಮೇ 1ರಿಂದ ಈವರೆಗೂ 4,72,06,953 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 9,68,098 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

1,00,87,937 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 70,17,515 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,69,55,109 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 89,36,126 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,78,84,703 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,22,92,589 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,35,22,368 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,04,46,074 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಭಾರತದಲ್ಲಿ ಕೊವಿಡ್-19 ದಾಖಲೆಯ ಇಳಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆಯ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ62,224 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,07,628 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2542 ಮಂದಿ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಒಟ್ಟು 2,96,33,105 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,83,88,100 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,79,573 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 8,65,432 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
In 152 Days 26.53 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X