ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡವರ ಲೆಕ್ಕ?

ನವದೆಹಲಿ, ಜೂನ್ 17: ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಹರಡುವಿಕೆ ಭೀತಿ ನಡುವೆ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 29 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಗುರುವಾರ ರಾತ್ರಿ 7 ಗಂಟೆ ವೇಳೆಗೆ 29,64,596 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 25,81,421 ಜನರಿಗೆ ಮೊದಲ ಡೋಸ್ ಹಾಗೂ 3,83,175 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 153 ದಿನಗಳಲ್ಲಿ 26,86,65,914 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

ಭಾರತದಲ್ಲಿ 15 ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಹಂತ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಭಾರತದಲ್ಲಿ ಮೇ 1ರಿಂದ ಈವರೆಗೂ 4,93,56,276 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 10,58,514 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

1,00,95,383 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 70,32,270 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,69,96,277 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 89,63,142 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,84,18,488 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,23,95,893 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,37,34,314 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,06,15,357 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 67,208 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,03,570 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2,330 ಮಂದಿ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಒಟ್ಟು 2,97,00,313 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,84,91,670 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,81,903 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 8,26,740 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊವಿಡ್-19 ಸೋಂಕಿತ ತಪಾಸಣೆ?

ಭಾರತದಲ್ಲಿ ಕೊವಿಡ್-19 ಸೋಂಕಿತ ತಪಾಸಣೆ?

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಜೊತೆ ಪರೀಕ್ಷೆ ವೇಗವೂ ಇಳಿಮುಖವಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 19,31,249 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 38,52,38,220 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+