ಭಾರತ: ಕೊರೊನಾವೈರಸ್ ಭೀತಿ ನಡುವೆ ಲಸಿಕೆ ಪಡೆದವರು ಎಷ್ಟು ಮಂದಿ?

ನವದೆಹಲಿ, ಜೂನ್ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆ ವೇಗ ಹೆಚ್ಚಿಸಲಾಗಿದೆ. ಸೋಂಕು ಹರಡುವಿಕೆ ಭೀತಿಯ ನಡುವೆಯೇ ಜನರು ಲಸಿಕೆ ಪಡೆದುಕೊಳ್ಳುವುದಕ್ಕೆ ಮುಂದಾಗುತ್ತಿದ್ದಾರೆ. ಕಳೆದ ಒಂದು ದಿನದಲ್ಲಿ 29 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 29,84,172 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 26,24,028 ಜನರಿಗೆ ಮೊದಲ ಡೋಸ್ ಹಾಗೂ 3,60,144 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 154 ದಿನಗಳಲ್ಲಿ 27,20,72,645 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

ಭಾರತದಲ್ಲಿ 15 ರಾಜ್ಯಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಭಾರತದಲ್ಲಿ ಮೇ 1ರಿಂದ ಈವರೆಗೂ 5,15,68,603 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 11,40,679 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

1,01,02,747 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 70,46,810 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,70,37,592 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 89,91,830 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,89,56,180 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,25,01,203 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,39,46,759 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 2,07,80,242 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 62,480 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 88,977 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 1,587 ಮಂದಿ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಒಟ್ಟು 2,97,62,793 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,85,80,647 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,83,490 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ7,98,656 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊವಿಡ್-19 ಸೋಂಕಿತ ತಪಾಸಣೆ?

ಭಾರತದಲ್ಲಿ ಕೊವಿಡ್-19 ಸೋಂಕಿತ ತಪಾಸಣೆ?

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 19,29,476 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 38,7167,696 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+