ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದೇ ದಿನ 54.07 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಜೂನ್ 25: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಹೋರಾಟಕ್ಕೆ ನಾಲ್ಕು ಹಂತಗಳಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ. ದೇಶಾದ್ಯಂತ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಕಾರ್ಯ ನಡೆಯುತ್ತಿದೆ.

ಜನವರಿ 16ರಂದು ಮೊದಲ ಬಾರಿಗೆ ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧಿಕೃತವಾಗಿ ಚಾಲನೆ ನೀಡಿದರು. ಅಂದಿನಿಂದ 160 ದಿನಗಳಲ್ಲಿ 30,72,46,600 ಜನರಿಗೆ ಲಸಿಕೆ ನೀಡಲಾಗಿದೆ.

 ಡೆಲ್ಟಾ ರೂಪಾಂತರಿ 85 ದೇಶಗಳಲ್ಲಿ ಪತ್ತೆ, ಪ್ರಬಲ ವಂಶಾವಳಿಯಾಗುವ ಸಾಧ್ಯತೆ: WHO ಡೆಲ್ಟಾ ರೂಪಾಂತರಿ 85 ದೇಶಗಳಲ್ಲಿ ಪತ್ತೆ, ಪ್ರಬಲ ವಂಶಾವಳಿಯಾಗುವ ಸಾಧ್ಯತೆ: WHO

ದೇಶಾದ್ಯಂತ ನಾಲ್ಕನೇ ಹಂತದಲ್ಲಿ 18-44 ವರ್ಷದವರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಶುರುವಾಗಿರುವ ಹಿನ್ನೆಲೆ ಗುರುವಾರ ಸಂಜೆ 7 ಗಂಟೆ ವೇಳೆಗೆ 54,07,060 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

In 160 Days 30.72 Crore Beneficiaries Got Vaccinated Against Coronavirus Across India

ಮೊದಲ ಮೂರು ಹಂತದಲ್ಲಿ ಲಸಿಕೆ ವಿತರಣೆ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವಿವಿಧ ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಈವರೆಗೂ 7,43,45,835 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 15,70,839 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ನಾಲ್ಕನೇ ಹಂತದಲ್ಲಿ ಎಷ್ಟು ಮಂದಿಗೆ ಲಸಿಕೆ:

ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೆ 18-44 ವಯೋಮಾನದ 35,44,209 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 67,627 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಈ ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ:

ಭಾರತದಲ್ಲಿ 19 ರಾಜ್ಯಗಳಲ್ಲಿ 10 ಲಕ್ಷಕ್ಕಿಂತ ಹೆಚ್ಚು 18-44 ವಯೋಮಾನದ ಫಲಾನುಭವಿಗಳಿಗೆ ಲಸಿಕೆಗೆ ಆದ್ಯತೆ ನೀಡಲಾಗುತ್ತಿದೆ. ಆಂಧ್ರ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್ ಗಢ್, ದೆಹಲಿ, ಗುಜರಾತ್, ಹರಿಯಾಣ, ಜಾರ್ಖಂಡ್, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಒಡಿಶಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

English summary
In 160 Days 30.72 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X