ಭಾರತ: 24 ಗಂಟೆಗಳಲ್ಲಿ 41.34 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಜುಲೈ 05: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆ ಇನ್ನೂ ಅಂತ್ಯವಾಗಿಲ್ಲ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಲಸಿಕೆ ವಿತರಣೆ ಕಾರ್ಯ ಸಮಾರೋಪಾದಿಯಲ್ಲಿ ನಡೆಯುತ್ತಿದೆ.
ಕಳೆದ 24 ಗಂಟೆಗಳಲ್ಲಿ 41,34,868 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. 18 ರಿಂದ 44 ವಯೋಮಾನದ 18,30,741 ಜನರಿಗೆ ಮೊದಲ ಡೋಸ್ ಹಾಗೂ 1,40,368 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 171 ದಿನಗಳೇ ಕಳೆದಿವೆ. ದೇಶದಲ್ಲಿ ಇದುವರೆಗೂ ಒಟ್ಟು 35,71,05,461 ಮಂದಿಗೆ ಕೊವಿಡ್-19 ಲಸಿಕೆ ವಿತರಣೆ ಮಾಡಲಾಗಿದೆ.

ನಾಲ್ಕು ಹಂತಗಳಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.
ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.












Click it and Unblock the Notifications