ಭಾರತದಲ್ಲಿ 36.45 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಜುಲೈ 07: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆ ಅಭಿಯಾನ ಆರಂಭಿಸಿ 173 ದಿನಗಳೇ ಕಳೆದಿವೆ. ಜನವರಿ 16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಸಿಕೆ ವಿತರಣೆಗೆ ಅಧಿಕೃತವಾಗಿ ಚಾಲನೆ ನೀಡಿದರು.

ದೇಶದಲ್ಲಿ ಬುಧವಾರ ರಾತ್ರಿ 7 ಗಂಟೆ ವೇಳೆಗೆ 31,04,426 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 36,45,69,414 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

18 ರಿಂದ 44 ವಯೋಮಾನದ 14,04,816 ಜನರಿಗೆ ಮೊದಲ ಡೋಸ್ ಹಾಗೂ 1,35,166 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ ಇದೇ ವಯೋಮಾನದ 10,62,08,106 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ31,88,078 ಜನರಿಗೆ ಎರಡನೇ ಡೋಸ್ ಲಸಿಕೆ ವಿತರಿಸಲಾಗಿದೆ.

In 173 Days 36.45 Crore Beneficiaries Got Vaccinated Against Coronavirus Across India

ಭಾರತದಲ್ಲಿ ಲಸಿಕೆ ವಿತರಣೆ ಹಂತಗಳು:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು.

ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+