ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 38.50 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಜುಲೈ 14: ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 179 ದಿನಗಳಲ್ಲಿ 38.50 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 34,10,974 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 38,50,19,469 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಕೊರೊನಾ ಮೂರನೇ ಅಲೆ; ಜನರಿಗೆ ಎಚ್ಚರಿಕೆ ಕೊಟ್ಟ ಕೇಂದ್ರಕೊರೊನಾ ಮೂರನೇ ಅಲೆ; ಜನರಿಗೆ ಎಚ್ಚರಿಕೆ ಕೊಟ್ಟ ಕೇಂದ್ರ

18 ರಿಂದ 44 ವಯೋಮಾನದ 15,49,982 ಜನರಿಗೆ ಮೊದಲ ಡೋಸ್ ಹಾಗೂ 1,19,121 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 11,59,50,619 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 40,19,089 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

In 179 Days 38.50 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ವಿತರಣೆ ಹಂತ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

50 ಲಕ್ಷಕ್ಕಿಂತ ಹೆಚ್ಚು ಡೋಸ್ ಲಸಿಕೆ ವಿತರಣೆ:

ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವಯೋಮಾನದ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

English summary
In 179 Days 38.50 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X