ಭಾರತದಲ್ಲಿ ಲಸಿಕೆ ವಿತರಣೆಯಲ್ಲಿ 18-44 ವಯೋಮಾನವರಿಗೆ ಆದ್ಯತೆ ಏಕೆ?

ನವದೆಹಲಿ, ಜುಲೈ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ.

ದೇಶದಲ್ಲಿ ಬುಧವಾರ ಒಂದೇ ದಿನ 18 ರಿಂದ 44 ವಯೋಮಾನದ 13,82,467 ಜನರಿಗೆ ಮೊದಲ ಡೋಸ್ ಹಾಗೂ 1,57,660 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 11,78,70,724 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 41,92,141 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 180 ದಿನಗಳೇ ಕಳೆದಿವೆ. ದೇಶದಲ್ಲಿ ಈವರೆಗೂ 39 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಬುಧವಾರ ರಾತ್ರಿ 7 ಗಂಟೆ ವೇಳೆಗೆ 32,10,451 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 39,10,53,156 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

In 180 Days 39 Crore Beneficiaries Got Vaccinated Against Coronavirus Across India

50 ಲಕ್ಷಕ್ಕಿಂತ ಹೆಚ್ಚು ಡೋಸ್ ಲಸಿಕೆ ವಿತರಣೆ:

ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವಯೋಮಾನದ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಹಂತ:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+