ಭಾರತದಲ್ಲಿ ಕೊರೊನಾವೈರಸ್ ಸಾವಿನ ಪ್ರಮಾಣ ಇಳಿಕೆಗೆ ಕಾರಣವೇನು?

ನವದೆಹಲಿ, ಜುಲೈ 21: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಮಾಣ ಮತ್ತು ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಲಸಿಕೆ ಪಡೆದವರಿಗೆ ಸಾವಿನ ಅಪಾಯ ತೀರಾ ವಿರಳ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ತಿಳಿಸಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಹೆಚ್ಚಿಸಿರುವುದೇ ಸಾವಿನ ಪ್ರಮಾಣ ಇಳಿಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಎರಡನೇ ಅಲೆಯಲ್ಲಿ ಮಧ್ಯಮ ವಯಸ್ಕರಿಗೆ ಹೆಚ್ಚು ಸೋಂಕು ಅಂಟಿಕೊಂಡಿದ್ದು, ಮೃತರ ಸಂಖ್ಯೆಯಲ್ಲೂ ಮಧ್ಯಮ ವಯಸ್ಕರೇ ಹೆತ್ತಾಗಿರುವುದು ಕಂಡು ಬಂದಿದೆ.

ಕೊವಿಡ್-19 ಸಾವಿನ ಸಂಖ್ಯೆಯನ್ನು ಇಳಿಮುಖಗೊಳಿಸುವ ನಿಟ್ಟಿನಲ್ಲಿ ಮಧ್ಯಮ ವಯಸ್ಕರಿಗೆ ಲಸಿಕೆ ನೀಡುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 186 ದಿನಗಳೇ ಕಳೆದು ಹೋಗಿವೆ. ಈವರೆಗೂ 41 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳವಾರ ವಿತರಿಸಲಾದ ಲಸಿಕೆ ಪ್ರಮಾಣ:
ಭಾರತದಲ್ಲಿ ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 31,79,469 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 41,52,25,632 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

In 186 Days 41.52 Crore Beneficiaries Got Vaccinated Against Coronavirus Across India


ಕೊರೊನಾವೈರಸ್ ಲಸಿಕೆ ವಿತರಣೆಯ ನಾಲ್ಕು ಹಂತಗಳು:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ:
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಸೋಮವಾರ ಒಂದೇ ದಿನ 18 ರಿಂದ 44 ವಯೋಮಾನದ 15,03,713 ಜನರಿಗೆ ಮೊದಲ ಡೋಸ್ ಹಾಗೂ 1,36,257 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 12,92,52,381 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 52,11,066 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

In 186 Days 41.52 Crore Beneficiaries Got Vaccinated Against Coronavirus Across India


3 ರಾಜ್ಯಗಳಲ್ಲಿ 1 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ:
ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+