ಭಾರತದಲ್ಲಿ 187 ದಿನಗಳಲ್ಲಿ ಎಷ್ಟು ಜನರಿಗೆ ಲಸಿಕೆ ವಿತರಣೆ?

ನವದೆಹಲಿ, ಜುಲೈ 22: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಮಾಣ ಇಳಿಮುಖವಾಗುತ್ತಿರುವುದಕ್ಕೆ ಲಸಿಕೆ ವಿತರಣೆ ವೇಗ ಹೆಚ್ಚಿಸುತ್ತಿರುವುದೇ ಕಾರಣ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ವಿಶ್ಲೇಷಿಸಿದ್ದಾರೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 187 ದಿನಗಳೇ ಕಳೆದು ಹೋಗಿವೆ. ಈವರೆಗೂ 41.78 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಬುಧವಾರ ರಾತ್ರಿ 7 ಗಂಟೆ ವೇಳೆಗೆ 20,83,892 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 41,78,51,151 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

In 187 Days 41.78 Crore Beneficiaries Got Vaccinated Against Coronavirus Across India

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ:

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಸೋಮವಾರ ಒಂದೇ ದಿನ 18 ರಿಂದ 44 ವಯೋಮಾನದ 10,04,581 ಜನರಿಗೆ ಮೊದಲ ಡೋಸ್ ಹಾಗೂ 95,964 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 13,04,46,413 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 53,17,567 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಕೊರೊನಾವೈರಸ್ ಲಸಿಕೆ ವಿತರಣೆಯ ನಾಲ್ಕು ಹಂತಗಳು:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

1 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ:

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

Recommended Video

      BS ಯಡಿಯೂರಪ್ಪಗೆ JDS ನಿಂದ ಪರೋಕ್ಷ ಆಹ್ವಾನ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+