ಕೊರೊನಾವೈರಸ್ ಕಡಿಮೆಯಾಗಲು ಕಾರಣವಾಯಿತೇ ಲಸಿಕೆ ವಿತರಣೆ!?

ನವದೆಹಲಿ, ಜುಲೈ 25: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಜೊತೆಗೆ ಸಾವಿನ ಪ್ರಕರಣಗಳ ಶೇಕಡಾವಾರು ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ದೇಶದ ಶೇ.97.36ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. ಹೊಸ ಪ್ರಕರಣಗಳ ಸಂಖ್ಯೆಯಲ್ಲೂ ಇಳಿಕೆಯಾಗಿರುವುದಕ್ಕೆ ಲಸಿಕೆ ವಿತರಣೆ ಕಾರಣ ಎಂದು ವಿಶ್ಲೇಷಿಸಲಾಗಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ವೇಗವನ್ನು ಹೆಚ್ಚಿಸುತ್ತಿದ್ದಂತೆ ಒಂದು ಕಡೆಯಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಯುತ್ತಿದ್ದಂತೆ ಇನ್ನೊಂದು ಕಡೆಯಲ್ಲಿ ಗುಣಮುಖರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ. ದೇಶದಲ್ಲಿ ಪ್ರಸ್ತುತ 4,08,212 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

ಭಾರತದಲ್ಲಿ ಭಾನುವಾರದ ಅಂಕಿ-ಅಂಶಗಳ ಪ್ರಕಾರ, ಒಂದು ದಿನದಲ್ಲಿ 39,742 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಮಹಾಮಾರಿಗೆ 535 ಮಂದಿ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 39,972 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಚೇತರಿಕೆ ಸಂಖ್ಯೆ 3,05,43,138ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಈವರೆಗೂ ಕೊವಿಡ್-19 ಸೋಂಕಿನಿಂದ 4,20,551 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಹಾಗಿದ್ದಲ್ಲಿ ಕೊವಿಡ್-19 ಲಸಿಕೆ ವಿತರಣೆ, ಸರ್ಕಾರದಿಂದ ಪೂರೈಕೆ ಆಗಿರುವ ಲಸಿಕೆ, ರಾಜ್ಯಗಳ ಬಳಿ ಬಾಕಿ ಉಳಿದಿರುವ ಲಸಿಕೆ ಪ್ರಮಾಣದ ಜೊತೆಗೆ ಸೋಂಕು ತಪಾಸಣೆ ವೇಗ ಎಷ್ಟರ ಮಟ್ಟಿಗಿದೆ ಎನ್ನುವುದರ ಕುರಿತು ಒಂದು ವಿಸ್ತೃತ ವರದಿ ಇಲ್ಲಿದೆ ಓದಿ.

190 ದಿನಗಳಿಂದ ನಡೆಯುತ್ತಿರುವ ಅಭಿಯಾನ

190 ದಿನಗಳಿಂದ ನಡೆಯುತ್ತಿರುವ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 190 ದಿನಗಳು ಕಳೆದಿವೆ. ಈ ಅವಧಿಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ದೇಶಾದ್ಯಂತ 43 ಕೋಟಿಗೂ ಅಧಿಕ ಜನರಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಕಳೆದ ಶನಿವಾರ ರಾತ್ರಿ 7 ಗಂಟೆ ವೇಳೆಗೆ 45,74,298 ಜನರಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದ್ದು, ಒಟ್ಟು 43,31,50,864 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.

4 ಹಂತಗಳಲ್ಲಿ ನಡೆಯುತ್ತಿರುವ ಲಸಿಕೆ ವಿತರಣೆ ಅಭಿಯಾನ

4 ಹಂತಗಳಲ್ಲಿ ನಡೆಯುತ್ತಿರುವ ಲಸಿಕೆ ವಿತರಣೆ ಅಭಿಯಾನ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಮಧ್ಯಮ ವಯಸ್ಕರಿಗೆ ಲಸಿಕೆ ವಿತರಿಸುವಲ್ಲಿ ಹೆಚ್ಚಿನ ಆದ್ಯತೆ

ಮಧ್ಯಮ ವಯಸ್ಕರಿಗೆ ಲಸಿಕೆ ವಿತರಿಸುವಲ್ಲಿ ಹೆಚ್ಚಿನ ಆದ್ಯತೆ

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ದೇಶದಲ್ಲಿ ಶನಿವಾರ ಒಂದೇ ದಿನ 18 ರಿಂದ 44 ವಯೋಮಾನದ 22,80,435 ಜನರಿಗೆ ಮೊದಲ ಡೋಸ್ ಹಾಗೂ 2,72,190 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 13,77,91,932 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 60,46,308 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ 1 ಕೋಟಿ ಜನರಿಗೆ ಲಸಿಕೆ

ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ 1 ಕೋಟಿ ಜನರಿಗೆ ಲಸಿಕೆ

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಸೋಂಕು ತಪಾಸಣೆ ವೇಗ?

ದೇಶದಲ್ಲಿ ಕೊವಿಡ್-19 ಸೋಂಕು ತಪಾಸಣೆ ವೇಗ?

14 ಲಕ್ಷ ಮಂದಿಗೆ ಕೊರೊನಾವೈರಸ್ ಪರೀಕ್ಷೆ: ದೇಶದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 17,18,756 ದೇಶದಲ್ಲಿ ಈವರೆಗೂ45,62,89,567 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+