ಭಾರತ: 1 ಗಂಟೆಯಲ್ಲಿ 1.50 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ!

ನವದೆಹಲಿ, ಜುಲೈ 26: ಭಾರತದಲ್ಲಿ ಪ್ರತಿಯೊಂದು ಗಂಟೆಗೆ 1.50 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 193 ದಿನಗಳೇ ಕಳೆದಿದ್ದು, ಈವರೆಗೂ 44 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 36,87,239 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 44,58,39,699 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ.

In 193 Days 44.58 Crore Beneficiaries Got Vaccinated Against Coronavirus Across India

ದೇಶದಲ್ಲಿ ಸೋಮವಾರ ಒಂದೇ ದಿನ 18 ರಿಂದ 44 ವಯೋಮಾನದ 17,71,541 ಜನರಿಗೆ ಮೊದಲ ಡೋಸ್ ಹಾಗೂ 2,69,421 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 14,43,08,571 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 68,72,779 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು ಯಾವುವು?

ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+