ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಸಿಕೆ ಸುದ್ದಿ: ಭಾರತದಲ್ಲಿ 47.78 ಕೋಟಿ ಜನರಿಗೆ ಕೊರೊನಾವೈರಸ್ ಇಂಜೆಕ್ಷನ್!

|
Google Oneindia Kannada News

ನವದೆಹಲಿ, ಆಗಸ್ಟ್ 3: ಕೊರೊನಾವೈರಸ್ ಮೂರನೇ ಅಲೆ ಆಗಸ್ಟ್ ಎರಡನೇ ವಾರದಿಂದಲೇ ವೇಗ ಹೆಚ್ಚಿಸಿಕೊಳ್ಳುವ ಅಪಾಯವಿದೆ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಎಚ್ಚರಿಕೆ ನೀಡಿದ್ದಾರೆ. ಇದರ ಮಧ್ಯೆ ಲಸಿಕೆ ವಿತರಣೆ ವೇಗವನ್ನೂ ಹೆಚ್ಚಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 199 ದಿನಗಳೇ ಕಳೆದಿದ್ದು, ಈವರೆಗೂ 47.78 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 53,67,190 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 47,78,00,587 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊವ್ಯಾಕ್ಸಿನ್ ಕೊರತೆ ಸೃಷ್ಟಿ ಹಿಂದಿನ ಅಸಲಿ ಕಾರಣವೇನು! ಭಾರತದಲ್ಲಿ ಕೊವ್ಯಾಕ್ಸಿನ್ ಕೊರತೆ ಸೃಷ್ಟಿ ಹಿಂದಿನ ಅಸಲಿ ಕಾರಣವೇನು!

ಕೊರೊನಾವೈರಸ್ ಲಸಿಕೆ ಅಭಿಯಾನದ ಹಂತಗಳು, ಕೇಂದ್ರ ಸರ್ಕಾರದಿಂದ ಲಸಿಕೆ ಖರೀದಿ ಪ್ರಮಾಣ, ಕೇಂದ್ರ ಆರೋಗ್ಯ ಸಚಿವಾಲಯದಿಂದ ಪೂರೈಕೆಯಾದ ಲಸಿಕೆ ಪ್ರಮಾಣ, ಲಸಿಕೆಯ ಬಳಕೆ ಪ್ರಮಾಣ ಹಾಗೂ ಲಸಿಕೆ ಲಭ್ಯತೆ ಕುರಿತು ವಿವರಣಾತ್ಮಕ ವರದಿ ಇಲ್ಲಿದೆ ಓದಿ.

 18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಬುಧವಾರ ಒಂದೇ ದಿನ 18 ರಿಂದ 44 ವಯೋಮಾನದ 27,76,234 ಜನರಿಗೆ ಮೊದಲ ಡೋಸ್ ಹಾಗೂ 4,82,253 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 15,99,07,360 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 93,86,280 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

 ಕೊವಿಡ್-19 ಲಸಿಕೆ ವಿತರಣೆಯ ಹಂತಗಳು

ಕೊವಿಡ್-19 ಲಸಿಕೆ ವಿತರಣೆಯ ಹಂತಗಳು

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

 ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳ ಬಗ್ಗೆ ತಿಳಿಯೋಣ

ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳ ಬಗ್ಗೆ ತಿಳಿಯೋಣ

ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

 ಕೇಂದ್ರ ಸರ್ಕಾರವೇ ಶೇ.75ರಷ್ಟು ಲಸಿಕೆ ಖರೀದಿಸಿದೆ

ಕೇಂದ್ರ ಸರ್ಕಾರವೇ ಶೇ.75ರಷ್ಟು ಲಸಿಕೆ ಖರೀದಿಸಿದೆ

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

 ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ

2021ರ ಆಗಸ್ಟ್ 02ರ ಅಂಕಿ-ಅಂಶಗಳ ಪ್ರಕಾರ, 49,64,98,050 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:
* ಪೂರೈಕೆಯಾದ ಲಸಿಕೆ ಪ್ರಮಾಣ - 49,64,98,050
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 9,84,610
* ಕೊವಿಡ್-19 ಲಸಿಕೆಯ ಲಭ್ಯತೆ - 3,14,34,654

English summary
In 199 Days 47.78 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X