ಸಂಪೂರ್ಣ ಮಾಹಿತಿ: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಶುರುವಾಗಿ 200 ದಿನ

ನವದೆಹಲಿ, ಆಗಸ್ಟ್ 4: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗನ್ನು ಕಟ್ಟಿ ಹಾಕುವ ದೃಷ್ಟಿಯಿಂದ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 200 ದಿನಗಳಾಗಿವೆ. 2021ರ ಜನವರಿ 16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದರು.

ದೇಶದಲ್ಲಿ 48 ಕೋಟಿಗೂ ಅಧಿಕಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 62,53,741 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಈವರೆಗೂ 48,52,86,570 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಡಿಸೆಂಬರ್ ತಿಂಗಳಾಂತ್ಯಕ್ಕೆ 96 ಕೋಟಿ ಅರ್ಹ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸುವ ಗುರಿಯನ್ನು ಹೊಂದಲಾಗಿದೆ. ಈ ನಿಟ್ಟಿನಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಹಂತ, ಕೇಂದ್ರ ಸರ್ಕಾರದಿಂದ ಲಸಿಕೆ ಖರೀದಿ ಪ್ರಮಾಣ, ಕೇಂದ್ರ ಆರೋಗ್ಯ ಸಚಿವಾಲಯದಿಂದ ಪೂರೈಕೆಯಾದ ಲಸಿಕೆ ಪ್ರಮಾಣ, ಲಸಿಕೆಯ ಬಳಕೆ ಪ್ರಮಾಣ ಹಾಗೂ ಲಸಿಕೆ ಲಭ್ಯತೆ ಕುರಿತು ಮಾಹಿತಿ ಇಲ್ಲಿದೆ ಓದಿ.

ಕೇಂದ್ರ ಸರ್ಕಾರವೇ ಶೇ.75ರಷ್ಟು ಲಸಿಕೆ ಖರೀದಿಸಿದೆ

ಕೇಂದ್ರ ಸರ್ಕಾರವೇ ಶೇ.75ರಷ್ಟು ಲಸಿಕೆ ಖರೀದಿಸಿದೆ

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಭಾರತದಲ್ಲಿ ಅನುಮೋದನೆ ಪಡೆದಿರುವ ಕೊವಿಡ್-19 ಲಸಿಕೆ

ಭಾರತದಲ್ಲಿ ಅನುಮೋದನೆ ಪಡೆದಿರುವ ಕೊವಿಡ್-19 ಲಸಿಕೆ

ಭಾರತದಲ್ಲಿ ಒಟ್ಟು ನಾಲ್ಕು ಕಂಪನಿಗಳ ಕೊರೊನಾವೈರಸ್ ಲಸಿಕೆಯ ವಿತರಣೆಗೆ ಅನುಮೋದನೆ ನೀಡಲಾಗಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿರುವ ಪುಣೆಯ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಲಸಿಕೆ. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್, ರಷ್ಯಾದಲ್ಲಿ ಸಂಶೋಧಿಸಿ ಭಾರತದ ರೆಡ್ಡೀಸ್ ಕಂಪನಿ ಜೊತೆಗಿನ ಸಹಭಾಗಿತ್ವದಲ್ಲಿ ಉತ್ಪಾದನೆ ಆಗುತ್ತಿರುವ ಸ್ಪುಟ್ನಿಕ್-ವಿ ಹಾಗೂ ಮಾಡೆರ್ನಾ ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ವೈದ್ಯಕೀಯ ಔಷಧೀಯ ನಿಯಂತ್ರಣ ಪ್ರಾಧಿಕಾರವು ಅನುಮೋದನೆ ನೀಡಲಾಗಿದೆ.

ಕೊವಿಡ್-19 ಲಸಿಕೆ ವಿತರಣೆಯ ಹಂತಗಳು

ಕೊವಿಡ್-19 ಲಸಿಕೆ ವಿತರಣೆಯ ಹಂತಗಳು

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

18-44 ವಯೋಮಾನದವರಿಗೆ ಲಸಿಕೆ ನೀಡಲು ಆದ್ಯತೆ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಮಂಗಳವಾರ ಒಂದೇ ದಿನ 18 ರಿಂದ 44 ವಯೋಮಾನದ 29,43,889 ಜನರಿಗೆ ಮೊದಲ ಡೋಸ್ ಹಾಗೂ 3,87,076 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 16,34,85,422 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 98,23,204 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳ ಬಗ್ಗೆ ತಿಳಿಯೋಣ

ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳ ಬಗ್ಗೆ ತಿಳಿಯೋಣ

ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಲಭ್ಯತೆ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಲಸಿಕೆ ಲಭ್ಯತೆ

2021ರ ಆಗಸ್ಟ್ 04ರ ಅಂಕಿ-ಅಂಶಗಳ ಪ್ರಕಾರ, 50,37,22,630 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 50,37,22,630

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 49,19,780

* ಬಳಕೆ ಆಗಿರುವ ಲಸಿಕೆ ಪ್ರಮಾಣ - 48,19,75,798

* ಕೊವಿಡ್-19 ಲಸಿಕೆಯ ಲಭ್ಯತೆ - 2,60,17,573

ಕೊವಿಡ್-19 ಸೋಂಕಿತ ಪ್ರಕರಣಗಳ ಬಗ್ಗೆ ನಿಮಗೆಷ್ಟು ಗೊತ್ತು?

ಕೊವಿಡ್-19 ಸೋಂಕಿತ ಪ್ರಕರಣಗಳ ಬಗ್ಗೆ ನಿಮಗೆಷ್ಟು ಗೊತ್ತು?

ಭಾರತದಲ್ಲಿ ಒಂದೇ ದಿನ 42,625 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 36,668 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 562 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಬುಧವಾರದ ಅಂಕಿ-ಅಂಶಗಳ ಪ್ರಕಾರ, ಭಾರತದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,17,69,132ಕ್ಕೆ ಏರಿಕೆಯಾಗಿದೆ. ಈವರೆಗೂ 3,09,33,022 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 4,25,757 ಜನರು ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 4,10,353 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+