24 ಗಂಟೆಗಳಲ್ಲೇ ಕೊವಿಡ್-19 ಲಸಿಕೆ ವಿತರಣೆಯಲ್ಲಿ ಶೇ.50ರಷ್ಟು ಇಳಿಮುಖ!

ನವದೆಹಲಿ, ಆಗಸ್ಟ್ 5: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆಯೊಂದೇ ರಾಜಮಾರ್ಗ ಎಂದು ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಅದಾಗ್ಯೂ, ಕಳೆದ 24 ಗಂಟೆಗಳಲ್ಲಿ ಲಸಿಕೆ ವಿತರಣೆ ಪ್ರಮಾಣವು ಶೇ.50ರಷ್ಟು ಕಡಿಮೆಯಾಗಿದೆ.

ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನವನ್ನು ಆರಂಭಿಸಿ 201 ದಿನಗಳೇ ಕಳೆದಿದ್ದು, ಕಳೆದ 24 ಗಂಟೆಗಳಲ್ಲಿ 33,50,612 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಮಂಗಳವಾರವಷ್ಟೇ ಒಂದೇ ದಿನ 62,53,741 ಜನರಿಗೆ ಲಸಿಕೆ ನೀಡಲಾಗಿತ್ತು. ಅದಾಗಿ 24 ಗಂಟೆಗಳಲ್ಲೇ ಲಸಿಕೆ ವಿತರಣೆ ಪ್ರಮಾಣ ಶೇ.50ರಷ್ಟು ಇಳಿಕೆಯಾಗಿದೆ. ದೇಶದಲ್ಲಿ ಈವರೆಗೂ 48,93,42,295 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಒತ್ತು ನೀಡಲಾಗುತ್ತಿದೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 In 201 Days 48.93 Crore Beneficiaries Got Vaccinated Against Coronavirus Across India

ಕೊವಿಡ್-19 ಲಸಿಕೆ ವಿತರಣೆಯ ಹಂತಗಳು

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿದೆ.

ಮಧ್ಯಮ ವಯಸ್ಕರಿಗೆ ಲಸಿಕೆ ನೀಡುವಲ್ಲಿ ಒತ್ತು:

ದೇಶದಲ್ಲಿ ಮಂಗಳವಾರ ಒಂದೇ ದಿನ 18 ರಿಂದ 44 ವಯೋಮಾನದ 18,36,439 ಜನರಿಗೆ ಮೊದಲ ಡೋಸ್ ಹಾಗೂ 3,89,589 ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಇದೇ ವಯೋಮಾನದ 16,61,98,236 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ1,02,51,772 ಜನರು ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ಅತಿಹೆಚ್ಚು ಲಸಿಕೆ ವಿತರಿಸಿದ ರಾಜ್ಯಗಳು ಯಾವುವು?

ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ 18-44 ವಯೋಮಾನದ 1 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಹೊರತಾಗಿ ಆಂಧ್ರ ಪ್ರದೇಶ, ಅಸ್ಸಾಂ, ಛತ್ತೀಸ್ ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ 18-44 ವಯೋಮಾನದ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರದಿಂದಲೇ ಲಸಿಕೆ ಖರೀದಿ ಕಾರ್ಯ:

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಕೊರೊನಾವೈರಸ್ ಲಸಿಕೆಯ ಶೇ.75ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರವೇ ಕಂಪನಿಗಳಿಂದ ನೇರವಾಗಿ ಖರೀದಿಸುತ್ತದೆ. ಹೀಗೆ ಖರೀದಿಸಿದ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಸರಬರಾಜು ಮಾಡಲಾಗುತ್ತದೆ. ದೇಶದಲ್ಲಿ ಪ್ರತಿಯೊಬ್ಬರಿಗೆ ಕೊವಿಡ್-19 ಲಸಿಕೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಲಸಿಕೆ ವಿತರಣೆ ಅಭಿಯಾನವನ್ನು ನಡೆಸಲಾಗುತ್ತಿದೆ.

ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಲಭ್ಯತೆ

2021ರ ಆಗಸ್ಟ್ 05ರ ಅಂಕಿ-ಅಂಶಗಳ ಪ್ರಕಾರ, 51,01,88,510 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

ಕೊರೊನಾವೈರಸ್ ಲಸಿಕೆ ಪೂರೈಕೆ ಮತ್ತು ಲಭ್ಯತೆ ಪಟ್ಟಿ:

* ಪೂರೈಕೆಯಾದ ಲಸಿಕೆ ಪ್ರಮಾಣ - 51,01,88,510

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 7,53,620

* ಬಳಕೆ ಆಗಿರುವ ಲಸಿಕೆ ಪ್ರಮಾಣ - 48,60,15,232

* ಕೊವಿಡ್-19 ಲಸಿಕೆಯ ಲಭ್ಯತೆ - 2,69,06,624

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+