ಭಾರತದಲ್ಲಿ 24 ಗಂಟೆಗಳಲ್ಲಿ 3,900 ಕೊರೊನಾ ಹೊಸ ಪ್ರಕರಣ ಪತ್ತೆ
ನವದೆಹಲಿ,ಮೇ 5: ಭಾರತದಲ್ಲಿ 24 ಗಂಟೆಗಳಲ್ಲಿ 3,900 ಕೊರೊನಾ ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇನ್ನು 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 195 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂ 1,568ಕ್ಕೆ ಏರಿಕೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 46,433ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ.
ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ 14,541 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಗುಜರಾತ್ ನಲ್ಲಿ 5,804 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು 46,433 ಮಂದಿ ಸೋಂಕಿತರ ಪೈಕಿ 12,727 ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 32,138 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.

ಡಿಸೆಂಬರ್ ಅಂತ್ಯದೊಳಗೆ ಕೊರೊನಾ ವೈರಸ್‌ಗೆ ಔಷಧ ಕಂಡು ಹಿಡಿಯುವ ಬಗ್ಗೆ ನಮಗೆ ನಂಬಿಕೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದೇವೆ ಎಂದರು. ಫಾಕ್ಸ್ ನ್ಯೂಸ್'ನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ವರ್ಷಾಂತ್ಯದೊಳಗೆ ಕೊರೋನಾ ನಿರ್ಮೂಲನಾ ಲಸಿಕೆ ನಮ್ಮ ಕೈ ಸೇರಲಿದೆ. ಈ ಬಗ್ಗೆ ನನಗೆ ವಿಶ್ವಾಸವಿದೆ.












Click it and Unblock the Notifications