ಭಾರತ: 38 ದಿನಗಳಲ್ಲಿ ಎಷ್ಟು ಜನರಿಗೆ ಸಿಕ್ಕಿದೆ ಕೊರೊನಾ ಲಸಿಕೆ?
ನವದೆಹಲಿ, ಫೆಬ್ರವರಿ.22: ಭಾರತದಲ್ಲಿ ಸೋಮವಾರ ಸಂಜೆ 6 ಗಂಟೆ ವೇಳೆ 3.07 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 38 ದಿನಗಳಲ್ಲಿ 1,14,24,094 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 64,25,060 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 11,15,542 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 38,83,492 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ.
ಮಹಾರಾಷ್ಟ್ರದಲ್ಲಿ ಹೀಗೆ ಏಕಾಏಕಿ ಕೊರೊನಾ ಸೋಂಕು ಹೆಚ್ಚಾಗಲು ಕಾರಣವೇನು?
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.
ಅತಿಹೆಚ್ಚು ಕೊರೊನಾವೈರಸ್ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 12,02,243
ಮಹಾರಾಷ್ಟ್ರ - 9,49,445
ಗುಜರಾತ್ - 8,96,667
ರಾಜಸ್ಥಾನ - 8,26,492
ಪಶ್ಚಿಮ ಬಂಗಾಳ - 7,12,744