ಭಾರತದಲ್ಲಿ ಒಂದೇ ದಿನ 2 ಲಕ್ಷ ಜನರಿಗೆ ಕೊರೊನಾ ಲಸಿಕೆ
ನವದೆಹಲಿ, ಫೆಬ್ರವರಿ.25: ಭಾರತದಲ್ಲಿ ಬುಧವಾರ ಸಂಜೆ 6 ಗಂಟೆ ವೇಳೆಗೆ 2.01 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. 83,354 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಕಳೆದ 40 ದಿನಗಳಲ್ಲಿ 1,23,66,633 ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 65,24,726 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 14,81,754 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 43,60,153 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿದೆ. ದೇಶದಲ್ಲಿ ಅತಿಹೆಚ್ಚು ಲಸಿಕೆ ವಿತರಿಸಿದ ಟಾಪ್-5 ರಾಜ್ಯಗಳ ಪಟ್ಟಿ ಮತ್ತು ಲಸಿಕೆ ಪಡೆದವರ ಸಂಖ್ಯೆ ಈ ಮುಂದಿನಂತಿದೆ.
ಅತಿಹೆಚ್ಚು ಕೊರೊನಾವೈರಸ್ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 12,26,775
ಮಹಾರಾಷ್ಟ್ರ - 10,58,136
ಗುಜರಾತ್ - 9,10,064
ರಾಜಸ್ಥಾನ - 8,80,207
ಪಶ್ಚಿಮ ಬಂಗಾಳ - 8,35,026












Click it and Unblock the Notifications