ಭಾರತ: 41 ದಿನಗಳಲ್ಲಿ 1.30 ಕೋಟಿ ಜನರಿಗೆ ಕೊರೊನಾ ಲಸಿಕೆ

ನವದೆಹಲಿ, ಫೆಬ್ರವರಿ.26: ಭಾರತದಲ್ಲಿ ಒಂದೇ ದಿನ 3.95 ಲಕ್ಷ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. 2,44,511 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕಳೆದ 41 ದಿನಗಳಲ್ಲಿ 1,30,67,047 ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 65,82,007 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 18,60,859 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 46,24,181 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ.

In 41 Days 1.30 Crore Beneficiaries Got Vaccinated Against Coronavirus Across India

ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿದೆ. ದೇಶದಲ್ಲಿ ಅತಿಹೆಚ್ಚು ಲಸಿಕೆ ವಿತರಿಸಿದ ಟಾಪ್-5 ರಾಜ್ಯಗಳ ಪಟ್ಟಿ ಮತ್ತು ಲಸಿಕೆ ಪಡೆದವರ ಸಂಖ್ಯೆ ಈ ಮುಂದಿನಂತಿದೆ.

ಅತಿಹೆಚ್ಚು ಕೊರೊನಾವೈರಸ್ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:

ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು

ಉತ್ತರ ಪ್ರದೇಶ - 13,10,634

ಮಹಾರಾಷ್ಟ್ರ - 11,09,055

ಗುಜರಾತ್ - 9,49,529

ರಾಜಸ್ಥಾನ - 9,31,292

ಪಶ್ಚಿಮ ಬಂಗಾಳ - 9,23,595

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+