ಭಾರತದಲ್ಲಿ 1.54 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಮಾರ್ಚ್.03: ಭಾರತದಲ್ಲಿ ಬುಧವಾರ ಸಂಜೆ 7 ಗಂಟೆ ವೇಳೆಗೆ 6.09 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 46 ದಿನಗಳಲ್ಲಿ 1,54,61,864 ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 67,32,944 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 26,85,665 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 55,47,426 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 828 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿದೆ.

In 46 Days 1.54 Crore Beneficiaries Got Vaccinated Against Coronavirus Across India

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, 48 ಗಂಟೆಗಳಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ 4,34,981 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಇದರ ಜೊತೆಗೆ 45 ವರ್ಷಕ್ಕಿಂತ ಮೇಲ್ಪಟ್ಟ 60,020 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

24 ಗಂಟೆಗಳಲ್ಲಿ ಯಾರಿಗೆ ಎಷ್ಟು ಲಸಿಕೆ?:

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 28413 - 87916

ಮೊದಲ ಶ್ರೇಣಿ ಕಾರ್ಮಿಕರು - 204958 - 828

45 ರಿಂದ 60 ವರ್ಷದೊಳಗಿನವರು - 35741 - -

60 ವರ್ಷ ಮೇಲ್ಪಟ್ಟವರು - 251989 - -

ಒಟ್ಟು ಕೊರೊನಾವೈರಸ್ ಲಸಿಕೆ - 521101 - 88744

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+