ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಒಂದೇ ದಿನ 10.93 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಮಾರ್ಚ್.05: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನದ ವೇಗ ಹೆಚ್ಚಿದೆ. ಗುರುವಾರ ಸಂಜೆ 7 ಗಂಟೆ ವೇಳೆಗೆ 10.93 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕಳೆದ 48 ದಿನಗಳಲ್ಲಿ 1,77,11,287 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 68,38,077 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 30,82,942 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 60,22,136 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 54,177 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ಕೊವಿಡ್ 19: ಮಾ.4ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?ಕೊವಿಡ್ 19: ಮಾ.4ರಂದು ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

In 48 Days 1.77 Crore Beneficiaries Got Vaccinated Against Coronavirus Across India

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, 4 ದಿನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ 14,95,016 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಇದರ ಜೊತೆಗೆ 45 ವರ್ಷಕ್ಕಿಂತ ಮೇಲ್ಪಟ್ಟ 2,18,939 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಒಂದು ದಿನದಲ್ಲಿ ಯಾರಿಗೆ ಎಷ್ಟು ಲಸಿಕೆ?:

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 47137 - 209838

ಮೊದಲ ಶ್ರೇಣಿ ಕಾರ್ಮಿಕರು - 217858 - 49975

45 ರಿಂದ 60 ವರ್ಷದೊಳಗಿನವರು - 75147 - -

60 ವರ್ಷ ಮೇಲ್ಪಟ್ಟವರು - 493999 - -

ಒಟ್ಟು ಕೊರೊನಾವೈರಸ್ ಲಸಿಕೆ - 834141 - 259813

English summary
In 48 Days 1.77 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X