ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

53ರ ಲೆಕ್ಕ: ಭಾರತದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡವರೆಷ್ಟು ಜನ?

|
Google Oneindia Kannada News

ನವದೆಹಲಿ, ಮಾರ್ಚ್.09: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 53 ದಿನಗಳೇ ಕಳೆದಿವೆ. ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಕಳೆದ ಒಂದೇ ದಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಮಂಗಳವಾರ ಸಂಜೆ 7 ಗಂಟೆ ವೇಳೆಗೆ ದೇಶದಲ್ಲಿ 10.28 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್ 19: ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ? ಕೊವಿಡ್ 19: ಯಾವ ದೇಶದಲ್ಲಿ ಎಷ್ಟು ಮಂದಿ ಗುಣಮುಖ?

ಭಾರತದಲ್ಲಿ 53 ದಿನಗಳಲ್ಲಿ 2,40,37,644 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 71,13,801 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 38,51,808 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ.69,02,006 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 4,44,199 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

In 53 Days 2.40 Crore Beneficiaries Got Vaccinated Against Coronavirus Across India

ಭಾರತದಲ್ಲಿ ಎರಡು ಮಾದರಿ ಲಸಿಕೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

ಎರಡನೇ ಹಂತದ ಲಸಿಕೆ ಅಭಿಯಾನ:

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, 9 ದಿನದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ 8,00,287 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ. ಇದರ ಜೊತೆಗೆ 45 ವರ್ಷಕ್ಕಿಂತ ಮೇಲ್ಪಟ್ಟ 49,25,543 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಯಾರಿಗೆ ಎಷ್ಟು ಲಸಿಕೆ?:

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 38,791 - 1,12,330

ಮೊದಲ ಶ್ರೇಣಿ ಕಾರ್ಮಿಕರು - 1,09,687 - 1,18,227

45 ರಿಂದ 60 ವರ್ಷದೊಳಗಿನವರು - 98,478 - -

60 ವರ್ಷ ಮೇಲ್ಪಟ್ಟವರು - 5,51,398 - -

ಒಟ್ಟು ಕೊರೊನಾವೈರಸ್ ಲಸಿಕೆ - 79,8354 - 2,30,557

English summary
In 53 Days 2.40 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X