ಭಾರತದಲ್ಲಿ ಒಂದೇ ದಿನ 18.63 ಲಕ್ಷ ಜನರಿಗೆ ಕೊರೊನಾ ಲಸಿಕೆ

ನವದೆಹಲಿ, ಮಾರ್ಚ್ 16: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 59 ದಿನಗಳೇ ಕಳೆದಿದ್ದು, ಎರಡನೇ ಹಂತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಕಳೆದ ಒಂದೇ ದಿನ 18 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಸೋಮವಾರ ಸಂಜೆ 7 ಗಂಟೆ ವೇಳೆಗೆ ದೇಶದಲ್ಲಿ 18.63 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ 59 ದಿನಗಳಲ್ಲಿ 3,17,71,661 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 74,08,521 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 43,97,613 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 74,26,479 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 13,23,527 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

In 59 Days 3.17 Crore Beneficiaries Got Vaccinated Against Coronavirus Across India

ಎರಡನೇ ಹಂತದ ಲಸಿಕೆ ಅಭಿಯಾನ:

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್.01ರಿಂದ ಆರಂಭವಾಗಿದ್ದು, ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 16,96,497 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 95,19,024 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

24 ಗಂಟೆಗಳಲ್ಲಿ ಯಾರಿಗೆ ಎಷ್ಟು ಲಸಿಕೆ?:

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 52,766 - 92,495

ಮೊದಲ ಶ್ರೇಣಿ ಕಾರ್ಮಿಕರು - 86,056 - 1,72,992

45 ರಿಂದ 60 ವರ್ಷದೊಳಗಿನವರು - 2,32,483 - -

60 ವರ್ಷ ಮೇಲ್ಪಟ್ಟವರು - 12,26,831 - -

ಒಟ್ಟು ಕೊರೊನಾವೈರಸ್ ಲಸಿಕೆ - 15,98,136 - 2,65,487

ಭಾರತದಲ್ಲಿ ಎರಡು ಮಾದರಿ ಲಸಿಕೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+