ಭಾರತದಲ್ಲಿ ಕೊರೊನಾ 2ನೇ ಅಲೆ ನಡುವೆ ಲಸಿಕೆ ವಿತರಣೆ

ನವದೆಹಲಿ, ಮಾರ್ಚ್ 19: ಭಾರತದ ಹಲವು ರಾಜ್ಯಗಳಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಹರಡುತ್ತಿದೆ. ಸಾಂಕ್ರಾಮಿಕ ಪಿಡುಗಿನ ಆತಂಕದ ನಡುವೆ ದೇಶಾದ್ಯಂತ ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ.

ದೇಶದಲ್ಲಿ ಒಂದೇ ದಿನ 17 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಗುರುವಾರ ಸಂಜೆ 7 ಗಂಟೆ ವೇಳೆಗೆ 17.83 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ 62 ದಿನಗಳಲ್ಲಿ 3,89,20,259 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 76,19,786 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 46,92,962 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 78,11,126 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 21,50,198 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

In 62 Days 3.89 Crore Beneficiaries Got Vaccinated Against Coronavirus Across India

ಎರಡನೇ ಹಂತದ ಲಸಿಕೆ ಅಭಿಯಾನ:

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್ 01ರಿಂದ ಆರಂಭವಾಗಿದ್ದು, ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 127,27,942 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 1,39,18,245 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಒಂದು ದಿನದಲ್ಲಿ ಯಾರಿಗೆ ಎಷ್ಟು ಲಸಿಕೆ?:

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 49,750 - 59,487

ಮೊದಲ ಶ್ರೇಣಿ ಕಾರ್ಮಿಕರು - 94,375 - 2,40,660

45 ರಿಂದ 60 ವರ್ಷದೊಳಗಿನವರು - 2,70,539 - -

60 ವರ್ಷ ಮೇಲ್ಪಟ್ಟವರು - 10,68,492 - -

ಒಟ್ಟು ಕೊರೊನಾವೈರಸ್ ಲಸಿಕೆ - 14,83,156 - 3,00,147

ಭಾರತದಲ್ಲಿ ಎರಡು ಮಾದರಿ ಲಸಿಕೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್, ಫೆಬ್ರವರಿ 2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

Recommended Video

      Modi's best 3 advise to avoid covid 19 | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+