ಏನಿದು ಕೊರೊನಾ ಕಾಟ ತಪ್ಪಿಸಲು ಭಾರತ ಕಂಡುಕೊಂಡ ಮಾರ್ಗ?

ನವದೆಹಲಿ, ಮಾರ್ಚ್ 26: ಜಗತ್ತಿನಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರವಾಗಿರುವ ಭಾರತವು ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ಹೊಂದಿರುವ 3ನೇ ದೇಶವಾಗಿದೆ. ಅಂತಾರಾಷ್ಟ್ರೀಯ ಪಟ್ಟಿಯಲ್ಲಿ ಅಮೆರಿಕಾ ಮತ್ತು ಬ್ರೆಜಿಲ್ ನಂತರದ ಸ್ಥಾನದಲ್ಲಿ ಭಾರತವಿದೆ.

ದೇಶದಲ್ಲಿ ಕೊರೊನಾವೈರಸ್ ಕಾಟ ತಪ್ಪಿಸುವುದಕ್ಕಾಗಿ ಭಾರತ ಹೊಸ ಮಾರ್ಗ ಕಂಡು ಕೊಂಡಿದೆ. ಸೋಂಕು ಹರಡುವಿಕೆಯ ಪ್ರಮಾಣವನ್ನು ತಗ್ಗಿಸುವುದಕ್ಕಾಗಿ ಕೊವಿಡ್-19 ಲಸಿಕೆ ನೀಡುವ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಈವರೆಗೂ 5.46 ಕೋಟಿ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶಾದ್ಯಂತ ಒಂದೇ ದಿನದಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಬುಧವಾರ ಸಂಜೆ 7 ಗಂಟೆ ವೇಳೆಗೆ ದೇಶದಲ್ಲಿ 15.20 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮೊದಲ ಶ್ರೇಣಿ ಕಾರ್ಮಿಕರು, ವೈದ್ಯರಿಕೆ ಲಸಿಕೆ

ಮೊದಲ ಶ್ರೇಣಿ ಕಾರ್ಮಿಕರು, ವೈದ್ಯರಿಕೆ ಲಸಿಕೆ

ಭಾರತದಲ್ಲಿ 69 ದಿನಗಳಲ್ಲಿ 5,46,65,820 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 80,18,757 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 50,92,757 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 85,53,228 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 33,19,005 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

45 ಮತ್ತು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ

45 ಮತ್ತು 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್ 1ರಿಂದ ಆರಂಭವಾಗಿದ್ದು, ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 54,31,424 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 2,42,50,649 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಒಂದು ದಿನದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?

ಒಂದು ದಿನದಲ್ಲಿ ಯಾರಿಗೆಷ್ಟು ಲಸಿಕೆ ವಿತರಣೆ?

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 37,908 - 30,967

ಮೊದಲ ಶ್ರೇಣಿ ಕಾರ್ಮಿಕರು - 74,750 - 81,624

45 ರಿಂದ 60 ವರ್ಷದೊಳಗಿನವರು - 2,99,475 - -

60 ವರ್ಷ ಮೇಲ್ಪಟ್ಟವರು - 9,95,387 - -

ಒಟ್ಟು ಕೊರೊನಾವೈರಸ್ ಲಸಿಕೆ - 14,07,520 - 1,12,591

ದೇಶದಲ್ಲಿ ಎರಡು ಮಾದರಿಯ ಲಸಿಕೆ ವಿತರಣೆ

ದೇಶದಲ್ಲಿ ಎರಡು ಮಾದರಿಯ ಲಸಿಕೆ ವಿತರಣೆ

ದೇಶದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಫೆಬ್ರವರಿ 2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+