ಮಾಹಿತಿ: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಪ್ರಗತಿ ಹೇಗಿದೆ?

ನವದೆಹಲಿ, ಏಪ್ರಿಲ್ 07: ಕೊರೊನಾವೈರಸ್ ಲಸಿಕೆ ಕೊರತೆಯಿದೆ ಎಂಬ ಆರೋಪದ ನಡುವೆ ದೇಶದಲ್ಲಿ ಲಸಿಕೆ ವಿತರಣೆಯನ್ನು ಹೆಚ್ಚಿಸಲಾಗಿದೆ. ಭಾರತದಲ್ಲಿ 8.83 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ.

ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 82 ದಿನಗಳಾಗಿವೆ. ಬುಧವಾರ ರಾತ್ರಿ 8 ಗಂಟೆವರೆಗೆ 13.14 ಲಕ್ಷ ಜನರಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ 8,83,72,277 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ 89,65,839 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 54,04,837 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ.97,40,281 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 43,35,473 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

In 82 Days 8.83 Crore Beneficiaries Got Vaccinated Against Coronavirus Across India

45-59 ವರ್ಷದವರಿಗೆ ಕೊರೊನಾ ಲಸಿಕೆ:

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ2,26,42,318 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 4,47,060 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 3,57,78,684ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 10,57,785 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+