• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಲಸಿಕೆ ಉತ್ಸವ: ಭಾರತದಲ್ಲಿ ಒಂದೇ ದಿನ 27 ಲಕ್ಷ ಜನರಿಗೆ ಕೊರೊನಾ ಲಸಿಕೆ!

|

ನವದೆಹಲಿ, ಏಪ್ರಿಲ್ 11: ಕೊರೊನಾವೈರಸ್ ಎರಡನೇ ಅಲೆ ನಿಯಂತ್ರಣಕ್ಕೆ ಲಸಿಕೆ ವೇಗ ಹೆಚ್ಚಿಸುವುದೇ ಉತ್ತಮ ಮಾರ್ಗ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದಲ್ಲಿ ಲಸಿಕೆ ಉತ್ಸವದ ಮೊದಲ ದಿನ 27 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 86 ದಿನಗಳಲ್ಲಿ 10 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಭಾನುವಾರ ಒಂದೇ ದಿನ 27,69,888 ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 25,47,691 ಫಲಾನುಭವಿಗಳಿಗೆ ಮೊದಲ ಡೋಸ್, 2,22,197 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Corona Alert: ಯಾವ ರಾಜ್ಯಗಳು ಅತಿಹೆಚ್ಚು ಅಪಾಯ ಎದುರಿಸುತ್ತಿವೆ?
ದೇಶದಲ್ಲಿ ಈವರೆಗೂ 10,43,65,035 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಯಾವ ಫಲಾನುಭವಿಗಳಿಗೆ ಎಷ್ಟು ಲಸಿಕೆ ನೀಡಲಾಗಿದೆ ಎಂಬುದರ ಮಾಹಿತಿಗಾಗಿ ಮುಂದೆ ಓದಿ.

ಕಾರ್ಮಿಕರು ಮತ್ತು ಆರೋಗ್ಯ ಸಿಬ್ಬಂದಿಗೆ ಲಸಿಕೆ

ಕಾರ್ಮಿಕರು ಮತ್ತು ಆರೋಗ್ಯ ಸಿಬ್ಬಂದಿಗೆ ಲಸಿಕೆ

ದೇಶದಲ್ಲಿ 90,12,768 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 55,23,718 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 99,94,360 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 47,93,536 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ

60 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಲಸಿಕೆ

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 3,19,49,793 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,76,609 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,04,76,731 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 19,37,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಎರಡು ಮಾದರಿ ಕೊರೊನಾ ಲಸಿಕೆ ವಿತರಣೆ

ದೇಶದಲ್ಲಿ ಎರಡು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದರು.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಳಿತ

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಏರಿಳಿತ

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಅಟ್ಟಹಾಸ ಮಿತಿ ಮೀರಿದೆ. ಒಂದೇ ದಿನ 1,52,879 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಹೊಸ ದಾಖಲೆಯಾಗಿದೆ. ಕಳೆದ 24 ಗಂಟೆಗಳಲ್ಲಿ 839 ಜನರು ಮಹಾಮಾರಿಗೆ ಬಲಿಯಾಗಿದ್ದರೆ, 90,584 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,33,58,805ಕ್ಕೆ ಏರಿಕೆಯಾಗಿದೆ. ಈವರೆಗೂ 1,20,81,443 ಸೋಂಕಿತರು ಗುಣಮುಖರಾಗಿದ್ದು, 1,69,275 ಮಂದಿ ಪ್ರಾಣ ಬಿಟ್ಟಿದ್ದಾರೆ. 11,08,087 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
In 86 Days 10.43 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X