ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಲಸಿಕೆ ಉತ್ಸವದ 4ನೇ ದಿನ ಲಸಿಕೆ ಪಡೆದ ಫಲಾನುಭವಿಗಳೆಷ್ಟು?

|
Google Oneindia Kannada News

ನವದೆಹಲಿ, ಏಪ್ರಿಲ್ 15: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಿಯಂತ್ರಣಕ್ಕೆ ಸೋಂಕಿತ ತಪಾಸಣೆ ಮತ್ತು ಲಸಿಕೆ ವಿತರಣೆ ಮಾರ್ಗವನ್ನು ಕಂಡುಕೊಳ್ಳಲಾಗಿದೆ. ಲಸಿಕೆ ಉತ್ಸವದ ಕೊನೆಯ ದಿನ 31.39 ಲಕ್ಷ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ.
ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 89 ದಿನಗಳಲ್ಲಿ 11 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಬುಧವಾರ ಒಂದೇ ದಿನ 31,39,063 ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 27,19,964 ಫಲಾನುಭವಿಗಳಿಗೆ ಮೊದಲ ಡೋಸ್, 4,19,099 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಇತರ ಜಿಲ್ಲೆಗಳಿಗೂ ರಾತ್ರಿ ಕರ್ಫ್ಯೂ ವಿಸ್ತರಣೆ?: ಸಿಎಂ ಬಿಎಸ್‌ವೈ ಸುಳಿವುಇತರ ಜಿಲ್ಲೆಗಳಿಗೂ ರಾತ್ರಿ ಕರ್ಫ್ಯೂ ವಿಸ್ತರಣೆ?: ಸಿಎಂ ಬಿಎಸ್‌ವೈ ಸುಳಿವು

ದೇಶದಲ್ಲಿ ಈವರೆಗೂ 11,43,18,455 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಯಾವ ಫಲಾನುಭವಿಗಳಿಗೆ ಎಷ್ಟು ಲಸಿಕೆ ನೀಡಲಾಗಿದೆ.

In 89 Days 11.43 Crore Beneficiaries Got Vaccinated Against Coronavirus Across India

ಆರೋಗ್ಯ ಕಾರ್ಯಕರ್ತರು, ಕಾರ್ಮಿಕರಿಗೆ ಲಸಿಕೆ:
ದೇಶದಲ್ಲಿ 90,63,976 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 56,03,568 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,02,09,443 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 50,61,571 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 3,73,34,924 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 8,94,077 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,34,13,349 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 27,37,547 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ
ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

English summary
In 89 Days 11.43 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X