ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ: 90 ದಿನಗಳಲ್ಲಿ 11.70 ಕೋಟಿ ಜನರಿಗೆ ಕೊರೊನಾ ಲಸಿಕೆ!

|
Google Oneindia Kannada News

ನವದೆಹಲಿ, ಏಪ್ರಿಲ್ 16: ಕೊರೊನಾವೈರಸ್ ಸಾಂಕ್ರಿಮಿಕ ರೋಗದ ಹರಡುವಿಕೆ ವೇಗ ದಿನೇ ದಿನೆ ಹೆಚ್ಚುತ್ತಿದೆ. ಕೊವಿಡ್-19 ಸೋಂಕು ಅಂಟಿಕೊಳ್ಳದಂತೆ ಮುನ್ನೆಚ್ಚರಿಕೆ ವಹಿಸಲು ಲಸಿಕೆ ವಿತರಣೆ ಕಾರ್ಯವನ್ನು ನಡೆಸಲಾಗುತ್ತಿದೆ.

ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 90 ದಿನ ಕಳೆದಿದೆ. ಈವರೆಗೂ 11.70 ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ. ಗುರುವಾರ ಒಂದೇ ದಿನ 26,02,375 ಜನರಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 20,59,873 ಫಲಾನುಭವಿಗಳಿಗೆ ಮೊದಲ ಡೋಸ್, 5,42,502 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊವಿಡ್ 19: ಏಪ್ರಿಲ್ 15ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?ಕೊವಿಡ್ 19: ಏಪ್ರಿಲ್ 15ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?

ದೇಶದಲ್ಲಿ ಈವರೆಗೂ 11,70,96,037 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಯಾವ ಫಲಾನುಭವಿಗಳಿಗೆ ಎಷ್ಟು ಲಸಿಕೆ ನೀಡಲಾಗಿದೆ.

In 90 Days 11.70 Crore Beneficiaries Got Vaccinated Against Coronavirus Across India

ಮೊದಲ ಹಂತದಲ್ಲಿ ಲಸಿಕೆ ವಿತರಣೆ ಅಭಿಯಾನ:

ದೇಶದಲ್ಲಿ 90,82,153 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 56,33,982 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,02,90,850 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 51,51,557 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 3,86,76,098 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 9,84,785 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ4,41,90,147 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 30,86,465 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಮೂರು ಮಾದರಿ ಕೊರೊನಾ ಲಸಿಕೆ ವಿತರಣೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

English summary
In 90 Days 11.70 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X