ಭಾರತದಲ್ಲಿ 13.22 ಕೋಟಿ ಫಲಾನುಭವಿಗಳಿಗೆ ಉಚಿತ ಕೊರೊನಾ ಲಸಿಕೆ

ನವದೆಹಲಿ, ಏಪ್ರಿಲ್ 22: ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆ ಹರಡುವಿಕೆ 3 ಲಕ್ಷದ ಗಡಿ ದಾಟಿದೆ. ಒಂದೇ ದಿನ ದಾಖಲೆ ಮಟ್ಟದ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಲಸಿಕೆ ವಿತರಣೆ ಅಭಿಯಾನವನ್ನೂ ಅದೇ ವೇಗದಲ್ಲಿ ಹೆಚ್ಚಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 21 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಬುಧವಾರ ರಾತ್ರಿ 8 ಗಂಟೆವರೆಗೆ 21.21 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ 13,23,30,644 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೂ 92,19,080 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 58,51,361 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,16,28,882 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ59,32,541 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

In 96 Days 13.22 Crore Beneficiaries Got Vaccinated Against Coronavirus Across India

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,43,89,584 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 16,28,837 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,78,44,204 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 57,45,863 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+