ಭಾರತದಲ್ಲಿ 97 ದಿನಗಳ ಕೊರೊನಾವೈರಸ್ ಲಸಿಕೆ ವರದಿ

ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಣಕ್ಕೆ ಲಸಿಕೆ ನೀಡುವ ಮಾರ್ಗ ಕಂಡುಕೊಳ್ಳಲಾಗಿದೆ. ಕಳೆದ 24 ಗಂಟೆಗಳಲ್ಲಿ 30 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಗುರುವಾರ ರಾತ್ರಿ 8 ಗಂಟೆವರೆಗೆ 30,16,085 ಲಕ್ಷ ಜನರಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಈ ಪೈಕಿ 18,33,828 ಮಂದಿಗೆ ಮೊದಲ ಡೋಸ್ ಹಾಗೂ 11,82,257 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೆ 13,23,30,644 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೂ 92,41,384 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 59,03,368 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,17,27,708 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 60,73,622 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

 In 97 Days 13.53 Crore Beneficiaries Got Vaccinated Against Coronavirus Across India

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,55,10,426 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 18,91,160 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,85,01,906 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 64,97,155 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+